Published
2 months agoon
By
Akkare News
ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷ ಕುಸುಮ್’ರಾಜ್ ಮಾತನಾಡಿ, ಕಲೆಯ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ಇಲ್ಲಿ ನಡೆಯುತ್ತಿದೆ. ಒಟ್ಟು ಏಳು ವಿಭಾಗಗಳಲ್ಲಿ ನಡೆಯುತ್ತಿರುವ ಈ ಚಿತ್ರಕಲಾ ಸ್ಪರ್ಧೆಗೆ ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿರುವುದು ಸಂತೋಷದ ವಿಚಾರ ಎಂದರು.
ಇದೇ ಸಂದರ್ಭ ಕೊಂಬೆಟ್ಟು ಜ್ಯೂನಿಯರ್ ಕಾಲೇಜಿನ ಚಿತ್ರಕಲಾ ಶಿಕ್ಷಕ ಜಗನ್ನಾಥ ಅರಿಯಡ್ಕ ಅವರನ್ನು ಸನ್ಮಾನಿಸಲಾಯಿತು.
ಜಿ.ಎಲ್. ಸಮೂಹ ಸಂಸ್ಥೆಗಳ
ಜನರಲ್ ಮ್ಯಾನೇಜರ್ ಸಂತೋಷ್ ನಾಯಕ್ ಪುಣಚ
ಮತ್ತು ಮಾರ್ಕೆಟಿಂಗ್ ಮ್ಯಾನೇಜರ್
ಕೀರ್ತನ್ ಪೂಜಾರಿ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಪುತ್ತೂರು ಯುವದ ಪೂರ್ವಾಧ್ಯಕ್ಷ ಪಶುಪತಿ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.