ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರಾಗಿರುವ ಶೈಲಜಾ ಅಮರನಾಥ್ ಅವರಿಗೆ ಬೆಳಗಾವಿ ಉಸ್ತುವಾರಿ ವಹಿಸಲಾಗಿದೆ. ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದಿಂದ ಜವಾಬ್ದಾರಿ ಹಂಚಲಾಗಿದ್ದು ಪುತ್ತೂರಿನಲ್ಲಿ ನ್ಯಾಯವಾದಿಯಾಗಿರುವ ಬಪ್ಪಳಿಗೆ ನಿವಾಸಿ ಶೈಲಜಾ ಅಮರನಾಥ್ ಅವರನ್ನು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಿಸಲಾಗಿದೆ.
ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಮುಖಂಡರನ್ನು ವಕ್ತಾರರನ್ನಾಗಿ ಆಯ್ಕೆ ಮಾಡುವ ಜವಾಬ್ದಾರಿ ಶೈಲಜಾ ಅಮರನಾಥ್ ಅವರದ್ದಾಗಿದೆ.