Published
2 months agoon
By
Akkare News
ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಅಬ್ದುಲ್ ಜಬ್ಬಾರ್ ಎಂಬವರೇ ಆರೋಪಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಮೃತಪಟ್ಟ ದುರ್ದೈವಿ. ಈ ಬಗ್ಗೆ ಪತ್ನಿ ಸುಮಯ್ಯಾ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ನಡೆಸಲಾಗಿ, ಆರೋಪಿಯಾದ ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಎಂಬಾತನನ್ನು ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಪ್ರಕರಣದ ಮುಂದಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿರುತ್ತದೆ. ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪ್ರಕರಣದ ಇನ್ನೋರ್ವ ಆರೋಪಿಯಾದ ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ ಎಸ್ @ ಮನು (42) ಎಂಬಾತನನ್ನು ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮುಂದಿನ ತನಿಖೆ ನಡೆಸಲಾಗುವುದು.
ಪ್ರಕರಣದ ಪಿರ್ಯಾದಿದಾರರಾದ ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಸುಮಯ್ಯಾ (35) ಎಂಬವರ ದೂರಿನಂತೆ, ಪಿರ್ಯಾದುದಾರರ ಗಂಡ ಅಬ್ದುಲ್ ಜಬ್ಬಾರ್ ಎಂಬವರನ್ನು, ದಿನಾಂಕ ಅಕ್ಟೋಬರ್ 16 ರಂದು ಮದ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿ ಕಳುಹಿಸಿರುತ್ತಾರೆ. ಮುಂದುವರಿದoತೆ ಆಕ್ಟೋಬರ್ 17 ರಂದು ಪಿರ್ಯಾದುದಾರರ ಗಂಡ ಅಬ್ದುಲ್ ಜಬ್ಬಾರ್ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಮೃತಪಟ್ಟಿರುತ್ತಾರೆ.
ಪಿರ್ಯಾದಿದಾರರ ಗಂಡ ಅಬ್ದುಲ್ ಜಬ್ಬಾರ್‌ನ ಸಾವಿಗೆ ರಪೀಕ್ ಪಡು ಮತ್ತು ಇತರರು ಕಾರಣರಾಗಿರುತ್ತಾರೆ ಎಂಬುದಾಗಿ ಅಕ್ಟೋಬರ್18ರಂದು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 125/2025, ಕಲಂ: 105 ಜೊತೆಗೆ 3(5)BNS ರಂತೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳು ನಡೆಸಿದ ಹಲ್ಲೆಯ ಪರಿಣಾಮ ಸದ್ರಿ ಅಬ್ದುಲ್ ಜಬ್ಬಾರ್ ರವರು ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿರುವುದರಿಂದ ಪ್ರಸ್ತುತ ಸದ್ರಿ ಪ್ರಕರಣವನ್ನು ಕಲಂ: 103 ಜೊತೆಗೆ 3(5)BNS ರಂತೆ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿರುತ್ತದೆ.