ಮಂಗಳೂರು: ನಾಡಿನ ಖ್ಯಾತ ಶಿಕ್ಷಣ ತಜ್ಞ, ಉದ್ಯಮಿ ಹಾಗೂ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎನ್. ವಿನಯ ಹೆಗ್ಡೆ (86) ಅವರು ಗುರುವಾರ ಬೆಳಗಿನ ಜಾವ ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿಯ ನಿಟ್ಟೆಯಲ್ಲಿರುವ ಅವರ ನಿವಾಸ ‘ಸದಾನಂದ’ದಲ್ಲಿ ಬೆಳಿಗ್ಗೆ ನಿಧನರಾದರು .
ಕೆಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.