Connect with us

ಇತರ

ಶೀಘ್ರದಲ್ಲೇ ಪಂಚಾಯತ್ ಚುನಾವಣೆ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

Published

on

ಬೆಂಗಳೂರು: ಪಂಚಾಯತಿ ಚುನಾವಣೆಯನ್ನು ಆದಷ್ಟು ಶೀಘ್ರವಾಗಿ ನಡೆಸಲು ತೀರ್ಮಾನಿಸಿದೆ. ಹಲವಾರು ಪಂಚಾಯ್ತಿಗಳು ಸುಪ್ರೀಂ ಕೋರ್ಟಿಗೆ ಹೋಗುವಂತೆ ರಾಜ್ಯ ಸರ್ಕಾರವನ್ನು ಕೋರಿವೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಮಾಡಲಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು.

ಸಚಿವ ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್ ಅವರು, ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ , ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು.

ಜನರ ನ್ಯಾಯಾಲಯಕ್ಕೂ ವಿಬಿಜಿ, ರಾಮ್ ಜಿ” ಯೋಜನೆಯ ತೆಗೆದುಕೊಂಡು ಹೋಗಲು ನಿರ್ಣಯಿಸಲಾಗಿದೆ ಎಂದ ಅವರು ಸಂವಿಧಾನದ 73 ನೇ ತಿದ್ದುಪಡಿಯಾದ ನಂತರ ದೇಶದಲ್ಲಿ ವಿಕೇಂದ್ರೀಕರಣವಾಗಿದೆ. ಈ ಯೋಜನೆಯಿಂದ ವಿಕೇಂದ್ರೀಕರಣಕ್ಕೆ ಕೊಡಲಿ ಏಟು ಬಿದ್ದಿದೆ. ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕನ್ನು ಕಿತ್ತುಕೊಳ್ಳುವ ಕೆಲಸವನ್ನು MNREGA ವಾಪಸ್ಸು ಪಡೆಯುವ ಮೂಲಕ ಮಾಡಲಾಗಿದೆ ಎಂದರು. MNREGA ಮೂಲಕ ಪಂಚಾಯಿತಿಗಳಲ್ಲಿ ಆಸ್ತಿ ನಿರ್ಮಾಣವಾಗುತ್ತಿತ್ತು. ಈಗ ಕರಾಳ ಕಾನೂನು ತಂದು ಕಾರ್ಮಿಕರು ಗುತ್ತಿಗೆದಾರರು ಮಾಡಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕೆಲಸ ಮಾಡಬೇಕಿದೆ.

ಕೂಲಿಕಾರರ ಹಿತ ಕಾಪಾಡುವ ಆಸಕ್ತಿಯನ್ನು ಕೇಂದ್ರ ಸರ್ಕಾರ ತೋರಿಸಿಲ್ಲ . ಬದಲಿಗೆ ಉದ್ಯೋಗದ ಹಕ್ಕನ್ನು ಕಿತ್ತುಕೊಂಡಿದೆ. ಗ್ರಾಮಗಳಲ್ಲಿ ಯಾವ ಕೆಲಸವಾಗಬೇಕೆಂದು ತೀರ್ಮಾನಿಸುವ ಅಧಿಕಾರ ಪಂಚಾಯಿತಿಗಳಿಗಿತ್ತು. ಈಗ ಅದನ್ನು ಸಂಪೂರ್ಣವಾಗಿ ಕಿತ್ತುಕೊಂಡು ಕೆಲಸ ಎಲ್ಲಿ ಆಗಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಈ ಕರಾಳ ಶಾಸನವನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸುತ್ತದೆ. ರಾಜಕೀಯವಾಗಿ, ಕಾನೂನಾತ್ಮಕವಾಗಿ ಹಾಗೂ ಜನರ ನ್ಯಾಯಾಲಯದಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version