Connect with us

ಇತರ

ಸಾಂದೀಪನಿಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Published

on

ಪುತ್ತೂರು.ಜ.13: ಪುತ್ತೂರು ತಾಲೂಕು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 13/01/2026 ನೇ ಮಂಗಳವಾರ ರಾಷ್ಟೀಯ ಜೆ. ಸಿ ತರಬೇತುದಾರರಾದ
ಶ್ರೀ ವೇಣುಗೋಪಾಲ್. ಎಸ್ ಜೆ ಇವರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಿತು.

ವಿದ್ಯಾರ್ಥಿಗಳಿಗೆ ಅನೇಕ ಚಟುವಟಿಕೆಗಳನ್ನು ನೀಡುವುದರ ಮೂಲಕ ಪರೀಕ್ಷೆ ಗಳನ್ನು ಎದುರಿಸುವ ಬಗ್ಗೆ ಮಾಹಿತಿಯನ್ನು ತರಬೇತುದಾರರು ನೀಡಿದರು.

ವಿದ್ಯಾರ್ಥಿಗಳು ಸಕ್ರಿಯವಾಗಿ ಈ ಕಾರ್ಯಾಗಾರದಲ್ಲಿ ಪಾಲ್ಗೊಂಡು ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಂಡರು.

ಈ ಕಾರ್ಯಕ್ರಮದಲ್ಲಿ ಶಾಲಾ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಪ್ರಸಾದ್ ಕೆದಿಲಾಯ, ಕೋಶಾಧಿಕಾರಿಗಳಾದ ಶ್ರೀ ಹರೀಶ್ ಪುತ್ತೂರಾಯ ಹಾಗೂ ಶಾಲಾ ಮುಖ್ಯ ಗುರುಗಳಾದ ಶ್ರೀ ಪ್ರಸನ್ನ ಕೆ ಇವರುಗಳು ಉಪಸ್ಥಿತರಿದ್ದರು.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version