Published
2 months agoon
By
Akkare News

18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದು. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂಪಾಯಿನಿಂದ 200 ರೂಪಾಯಿವರೆಗೆ ವಂತಿಗೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಸೌಲಭ್ಯ ಪಡೆಯಬಹುದು. 
ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್ ಎಚ್ ಜಿ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿಯೂಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು ಹಾಗೂ ಇನ್ನಿತರ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಮೊದಲ ತಿಂಗಳ ವಂತಿಗೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ನಗರದ ಯೆಯ್ಯಾಡಿ ಕಾರ್ಮಿಕ ಭವನದಲ್ಲಿರುವ ಕಾರ್ಮಿಕ ಅಧಿಕಾರಿಯವರ ಕಛೇರಿ ಅಥವಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






