Connect with us

ಇತರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ; ನಿತಿನ್ ನಬಿನ್‌ ಸಿಗಲಿದೆ ಸಾರಥಿ ಪಟ್ಟ

Published

on

ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಗೆ ಜನವರಿ 19 ರಂದು ನಾಮಪತ್ರ ಸಲ್ಲಿಸಲಾಗುತ್ತದೆ. ಮರುದಿನವೇ (ಜನವರಿ 20) ಪಕ್ಷದ ಹೊಸ ಅಧ್ಯಕ್ಷರ ಹೆಸರನ್ನು ಘೋಷಿಸಲಾಗುವುದು ಎಂದು ತಿಳಿಸಿದೆ. ಸದ್ಯಕ್ಕೆ ಬಿಜೆಪಿ ನಿತಿನ್ ನಬಿನ್ ಅವರನ್ನು ಪಕ್ಷದ ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಹಲವು ನಾಯಕರು ಕಣ್ಣೀಟ್ಟಿದ್ದು, ಬಿಜೆಪಿ ನಿತಿನ್ ನಬಿನ್ ಅವರನ್ನು ಪಕ್ಷದ ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಆದ್ದರಿಂದ, ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗುವುದು ಖಚಿತವೆಂದು ಹೇಳಲಾಗುತ್ತಿದೆ.


ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಜನವರಿ 19 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಹಿರಿಯ ನಾಯಕರು ಸಾಥ್‌ ನೀಡಲಿದ್ದಾರೆ. ಹಲವಾರು ತಿಂಗಳುಗಳ ಕಾಲ ಹಲವು ಭಿನ್ನಾಭಿಪ್ರಾಯದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಬ್ಬರೂ ಆಯ್ಕೆ ಮಾಡಿದ ಹೆಸರಿನ ಬಗ್ಗೆ ಸಂಪೂರ್ಣ ಒಮ್ಮತವನ್ನು ಸೂಚಿಸುವ ಏಕೈಕ ನಾಮನಿರ್ದೇಶನ ನಿತಿನ್‌ ನಬಿನ್ ಅವರಾಗಿದ್ದಾರೆ. ಆದ್ದರಿಂದ, ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗುವುದು ಖಚಿತವೆಂದು ಹೇಳಲಾಗುತ್ತಿದೆ.

ಹೆಚ್ಚಿನ ಮಾಹಿತಿಗೆ ನಗರದ ಯೆಯ್ಯಾಡಿ ಕಾರ್ಮಿಕ ಭವನದಲ್ಲಿರುವ ಕಾರ್ಮಿಕ ಅಧಿಕಾರಿಯವರ ಕಛೇರಿ  ಅಥವಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿತಿನ್ ನಬಿನ್ ಜನವರಿ 19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮನಿರ್ದೇಶನ ಪ್ರಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾಪಕರಾಗಿ ಹಾಜರಿರುತ್ತಾರೆ. ಬಿಜೆಪಿ ಪಕ್ಷದ ಅತ್ಯಂತ ದೀರ್ಘಾವಧಿಯ ನಾಯಕರಾದ ಜೆಪಿ ನಡ್ಡಾ ಅವರ ಸ್ಥಾನಕ್ಕೆ ನಿತಿನ್‌ ನಬಿನ್‌ ಅವರು ಅವಿರೋಧವಾಗಿ ಆಯ್ಕೆಯಾಗಿ ಬರಲಿದ್ದಾರೆ. ಇದು ಪಕ್ಷದ ಹಿರಿಯ ನಾಯಕರಲ್ಲಿ ನಬಿನ್ ಅವರ ನಾಯಕತ್ವದ ಮೇಲಿನ ಬಲವಾದ ಬೆಂಬಲ ಮತ್ತು ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಹಲವಾರು ಹಿರಿಯ ನಾಯಕರು, ಕೇಂದ್ರ ನಾಯಕತ್ವದ ಸದಸ್ಯರು ಮತ್ತು ಪ್ರಮುಖ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version