Published
2 months agoon
By
Akkare News
ನೆಲ್ಯಾಡಿ: ಭಕ್ತ ಮಹಾಜನರ ಸಹಕಾರದೊಂದಿಗೆ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ ಜ.22ರಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಯೇಸುದಾಸ್ ಹಾಗೂ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 8ರಿಂದ 108 ಕಾಯಿ ಗಣಹೋಮ ಮತ್ತು ಅಥರ್ವಶೀರ್ಷಾಭಿಷೇಕ, ಮಧ್ಯಾಹ್ನ 12.15ಕ್ಕೆ ಮಹಾಪೂಜೆ, 12.30ಕ್ಕೆ ಪಲ್ಲಪೂಜೆ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ 7.30ರಿಂದ ಮೂಡಪ್ಪ ಸೇವೆ, ರಾತ್ರಿ 9ರಿಂದ ಮಹಾಮಂಗಳಾರತಿ, ಪ್ರಸಾದ ವಿತರಣೆ, ನಂತರ ಅನ್ನಸಂತರ್ಪಣೆ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮ
ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರ ತನಕ ವಾಮನ್ ನಾಯಕ್ ಉಪ್ಪಿನಂಗಡಿ ಇವರ ಸಂಯೋಜನೆಯಲ್ಲಿ ಆಸಕ್ತ ವಿವಿಧ ಭಜನಾ ತಂಡಗಳಿಂದಭಜನಾ ಸೇವೆ, ಸಾಯಂಕಾಲ 5.30ರಿಂದ 6.30ರ ತನಕ ಶ್ರೀ ಕ್ಷೇತ್ರ ಸೌತಡ್ಕದ ಶಿಶುಮಂದಿರದ ಪುಟಾಣಿಗಳಿಂದ ಚಿಣ್ಣರ ಚಿಲಿಪಿಲಿ, 6.30ರಿಂದ 8.30ರ ತನಕ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಾಯಕ ಪುತ್ತೂರು ಚಂದ್ರಶೇಖರ ಹೆಗ್ಡೆ ನಿರ್ದೇಶನದ ಪುನೀತ್ ಆರ್ಕೆಸ್ಟ್ರಾ ಪುತ್ತೂರು ಇವರಿಂದ ಭಕ್ತಿ ಸಿಂಚನ, ಸುಗಮ ಸಂಗೀತ, ಭಕ್ತಿ, ಭಾವ ತತ್ವ ಪದಗಳ ಗೀತಾಸಂಗಮ ಕಾರ್ಯಕ್ರಮ ನಡೆಯಿತು. ರಾತ್ರಿ 9.30ರಿಂದ ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯೊಂದರ ಭಯಾನಕ ಕಥೆ, ಅದ್ದೂರಿ ರಂಗ ವಿನ್ಯಾಸದ ಎಲ್‌ಇಡಿ ಹೊಸ ತಂತ್ರಜ್ಞಾನದ ನರೇಶ್ ಕುಮಾರ್ ಸಸಿಹಿತ್ತು ನಿರ್ದೇಶನದ ‘ಬ್ರಹ್ಮ ರಕ್ಕಸ ತುಳು ನಾಟಕ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.