Connect with us

ಇತರ

ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ಕೋಟಿ ಚೆನ್ನಯರ ಜನ್ಮಸ್ಥಾನ ಪಡುಮಲೆ ಜ.24: ಪಡುಮಲೆಯಲ್ಲಿ ನಾಗಬೆರ್ಮರಿಗೆ, ತಾಯಿ ದೇಯಿ ಬೈದೆತಿಗೆ ವಿಶೇಷ ಪೂಜೆ, ದೀಪೋತ್ಸವ

Published

on

ಪುತ್ತೂರು: ಪಡುವನ್ನೂರು ಗ್ರಾಮದ ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆತಿಗೆ ವಿಶೇಷ ಪೂಜೆ ಮತ್ತು ದೀಪೋತ್ಸವವು ಜ.24ರಂದು ಸಂಜೆ ಗಂಟೆ 6.30ಕ್ಕೆ ನಡೆಯಲಿದೆ ಎಂದು ಪಡುಮಲೆ ಕೋಟಿಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್‌ನ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ರಾತ್ರಿ ಗಂಟೆ 7.30ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಮೂಡಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಜಿಯವರು ಮತ್ತು ಶ್ರೀ ವಿದ್ಯಾವಾಚಸ್ವತಿ ಡಾ.
ಸಂತೋಷ್ ಭಾರತೀ ಶ್ರೀಪಾದಂಗಳವರು ಅಶೀರ್ವಚನ ನೀಡಲಿದ್ದಾರೆ. ಮಾನವ ಹಕ್ಕುಗಳ ಆಯೋಗದ ಅದ್ಯಕ್ಷ ಟಿ.ಶ್ಯಾಮ್ ಭಟ್, ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾ‌ರ್, ಸಂಸದ ಕ್ಯಾ। ಬ್ರಿಜೇಶ್ ಚೌಟ, ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಶಾಸಕರಾದ ಅಶೋಕ್ ಕುಮಾ‌ರ್ ರೈ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಮಲ್ಲಿಕಾ ಪಕ್ಕಳ, ವಿಧಾನ ಪರಿಷತ್ ಸದಸ್ಯ ಕಿಶೋ‌ರ್ ಕುಮಾ‌ರ್ ಪುತ್ತೂರು, ಮಾಜಿ ಶಾಸಕರಾದ ಸಂಜೀವ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹಿತಿ ಹಲವಾರು ಮಂದಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಪಟ್ಲ, ಉಪಾಧ್ಯಕ್ಷ ವಿಜಯ ಕುಮಾ‌ರ್ ಸೊರಕೆ, ಟ್ರಸ್ಟಿಗಳಾದ ಶೇಖರ್ ನಾರಾವಿ, ರತನ್ ಕುಮಾ‌ರ್, ಮನೋಜ್ ಪೇರಾಲು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version