Connect with us

ಕ್ರೈಮ್ ನ್ಯೂಸ್

ಪುತ್ತೂರು: ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!

Published

on

ಜನವರಿ 22: ಜಡ್ಜ್ ಮುಂದೆಯೇ ವ್ಯಕ್ತಿಯೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ.
ಪುತ್ತೂರಿ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಆತನ ಪತ್ನಿ ವಿದ್ಯಾಶ್ರೀ ನಡುವೆ ಕಳಹ ನಡೆದಿದ್ದು, ಎರಡು ದಿನಗಳ ಹಿಂದೆ ವಿದ್ಯಾಶ್ರೀ ಅವರ ಕುತ್ತಿಗೆ ಹಿಸುಕಿ ಕೊಲೆಗೆ ರವಿ ಯತ್ನಿಸಿದ್ದ, ಗಂಡ-ಹೆಂಡತಿ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.

ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಇಂದು ಕೇಸ್ ದಾಖಲಾಗುವ ಸಾಧ್ಯತೆ ಇತ್ತು, ಹಾಗಾಗಿ ಇಬ್ಬರ ನಡುವೆ ವಿಚ್ಛೇದನದ ಮಾತುಕತೆ ನಡೆದಿತ್ತು. ಹಾಗಾಗಿ ಸಂಪ್ಯ ಠಾಣೆಗೆ ಹಾಜರಾಗಲು ರವಿಗೆ ಪೊಲೀಸರು ತಿಳಿಸಿದ್ದರು.

ಈ ನಡುವೆ ರವಿ ನೇರವಾಗಿ ಪುತ್ತೂರು ನ್ಯಾಯಾಲಯದ ಆವರಣಕ್ಕೆ ಬಂದು ಜಡ್ಜ್ ಮುಂದೆ ವಿಷ ಸೇವನೆ ಮಾಡಿದ್ದಾರೆ.

ಸಿಬ್ಬಂದಿಗೆ ಮೊದಲೇ ಸೂಚನೆ ನೀಡಿದ ಜಡ್ಜ್:

ವ್ಯಕ್ತಿಯೋರ್ವ ವಿಷ ಸೇವನೆ ಮಾಡುವ ಬಗ್ಗೆ ಜಡ್ಜ್ ಅಲ್ಲಿನ ಸಿಬ್ಬಂದಿಗೆ ಸೂಚನೆ ನೀಡಿದ್ದರು. ವಿಷ ಸೇವನೆ ಬಳಿಕ ರವಿ ನ್ಯಾಯಾಲಯದಲ್ಲಿಯೇ ವಾಂತಿ ಮಾಡಿದ್ದಾನೆ. ತಕ್ಷಣ ಎಚ್ಚೆತ್ತ ಅಲ್ಲಿನವರು ವ್ಯಕ್ತಿಯನ್ನ ಪುತ್ತೂರು ಸರ್ಕಾರಿ ಆಸ್ಪತ್ರಗೆ ರವಾನೆ ಮಾಡಲಾಗಿದೆ.

ಗೇರು ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನ ರವಿ ಸೇವಿಸಿದ್ದಾರೆ. ಎಂಡೋಸಲ್ಫಾನ್ ಬ್ಯಾನ್ ಆದ ಬಳಿಕ ಮಾರುಕಟ್ಟೆಯಲ್ಲಿ ಸಿಗುವ ‘ಕರಾಟೆ’ ಕೀಟನಾಶಕ ಸೇವಿಸಿದ ರವಿ ಸ್ಥಿತಿ ಗಂಭೀರ ವಾಗಿದೆ. ರವಿಯನ್ನ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಒಂದೇ ಆಂಬ್ಯುಲೆನ್ಸ್ ನಲ್ಲಿ‌ ದಂಪತಿ ತೆರಳಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement