Published
1 month agoon
By
Akkare News
ಇಲ್ಲಿಯವರೆಗೂ ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ಇದ್ದರೆ, SC, ST ಅಭ್ಯರ್ಥಿಗಳಿಗೆ 38 ವರ್ಷ ನಿಗದಿಪಡಿಸಲಾಗಿತ್ತು. ಆದರೀಗ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಆಗಲಿದ್ದು, 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ
ರಾಜ್ಯದ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದ ಸಹಾಯ ಹಸ್ತ ಚಾಚಲು ನಿರ್ಧರಿಸಿದೆ. 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಯನ್ನು ಮೂಲಭೂತ ಸೌಕರ್ಯ ಒಳಗೊಂಡಂತೆ ನಿರ್ಮಿಸಲು 100 ಕೋಟಿ ಮೊತ್ತದಲ್ಲಿ ನಿರ್ಮಿಸಲು ಸಂಪುಟ ಅನುಮೋದನೆ ನೀಡಿದೆ.
ದಲಿತ, ಹಿಂದುಳಿದ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57, 58 ರಲ್ಲಿರುವ ಸರ್ಕಾರಿ ಜಮೀನು ದಲಿತ, ಹಿಂದುಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ಸಮ್ಮತಿಸಲಾಗಿದೆ. ರಾಜ್ಯದ 08 ಜಿಲ್ಲೆಗಳಲ್ಲಿ ಪೌಷ್ಠಿಕ ಆಹಾರ ಯೋಜನೆಯಡಿ ಒಟ್ಟು 50,046 ಪರಿಶಿಷ್ಟ ಪಂಗಡಗಳಿಗೆ ಸೇರಿದ ಕುಟುಂಬಗಳಿಗೆ ರೂ. 145.03 ಕೋಟಿಗಳ ಅಂದಾಜು ಮೊತ್ತದಲ್ಲಿ ಆಹಾರ ಪದಾರ್ಥಗಳನ್ನು ಖರೀದಿಸಿ ಮುಂದಿನ 12 ತಿಂಗಳವರೆಗೆ ವಿತರಿಸಲು ಸಂಪುಟ ಅನುಮೋದನೆ ನೀಡಿದೆ.