Published
1 month agoon
By
Akkare Newsಮಂಗಳೂರು ಮಹಾನಗರ ಪಾಲಿಕೆ ಸೇರಿಂದತೆ ದಕ್ಷಿಣ ಕನ್ನಡದಲ್ಲಿ ಉದ್ಯೋಗಾಕವಾಶ ಹೆಚ್ಚಿಸಲು, ಯುವಜನರ ವಲಸೆ ತಪ್ಪಿಸಲು ಹಲವು ಕಾರ್ಯಕ್ರಮ ಆರಂಭ ಅಗಲಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮೀನುಗಾರಿಕಾ ಬಂದರಿನ ಆಧುನಿಕ ಯೋಜನೆ ನಡೆಯುತ್ತಿದೆ. ಯುವಕರನ್ನು ತಪ್ಪು ದಾರಿಗೆ ಎಳೆಯುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಂತಿ ಸಾಮರಸ್ಯದಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗಲಿದೆ.

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಲ್ಲಿ 165 ಕೋಟಿ ರೂ., ಜಿಲ್ಲೆಯ ಶಾಸಕರ ಕ್ಷೇತ್ರಾಭಿವೃದ್ಧಿಗೆ 190 ರೂ. ಮಂಜೂರು ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ 102 ಕೋಟಿ ರೂ. ಬಿಡುಗಡೆಯಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದ ನೆಹರೂ ಮೈದಾನದಲ್ಲಿ ಸೋಮವಾರ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ದ್ವಜಾರೋಹಣ ನೇರವೇರಿಸಿ, ಅವರು ಸಂದೇಶ ನೀಡಿದರು.