Connect with us

ಸ್ಥಳೀಯ

ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷರಾಗಿ ಸುಪ್ರಿತ್ ಕಣ್ಣಾರಾಯ ನೇಮಕ

Published

on

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ ,ಯುವ ಕಾಂಗ್ರೆಸ್ ನಾಯಕರಾದ ಸುಪ್ರಿತ್ ಕಣ್ಣಾರಾಯರವರನ್ನು ನೇಮಕ ಮಾಡಲಾಗಿದೆ.
ಸೋಮವಾರ ನಡೆದ ಸಾಮಾಜಿಕ ಜಾಲತಾಣದ ಪ್ರಮುಖರ ಸಭೆಯಲ್ಲಿ ಶಾಸಕ ಅಶೋಕ್ ರೈ ಅವರು ಈ ನೇಮಕಾತಿ ಮಾಡಿದ್ದಾರೆ.

ಇವರು ಈ ಹಿಂದೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಘಟಕದ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿದ್ದರು. ಸಭೆಯಲ್ಲಿ ಒಮ್ಮತದಿಂದ ಇವರನ್ನು ಆಯ್ಕೆ ಮಾಡಲಾಗಿದೆ. ಪುತ್ತೂರು ಬ್ಲಾಕ್ ,ವಿಟ್ಲ ಹಾಗೂ ಉಪ್ಪಿನಂಗಡಿಗೆ ಬ್ಲಾಕ್ ನ ಸಾಮಾಜಿಕ ಜಾಲತಾಣ ಘಟಕಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಮತ್ತು ಪ್ರತೀ ವಲಯ ಮತ್ತು ಬೂತ್ ಮಟ್ಟದಲ್ಲೂ ಸಾಮಾಜಿಕ ಜಾಲತಾಣಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂದು ಶಾಸಕರು ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement