Published
1 month agoon
By
Akkare News
ಬೆಂಗಳೂರು: ನಗರದ ಗಗನಚುಂಬಿ ಕಟ್ಟಡಗಳು, ಐಷಾರಾಮಿ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳ ಮೂಲಕ ತಮ್ಮದೇ ಆದ ಸಾಮ್ರಾಜ್ಯ ಕಟ್ಟಿದ್ದ ಕಾನ್ಫಿಡೆಂಟ್ ಗ್ರೂಪ್ ಚೇರ್‌ಮೆನ್ ಸಿಜೆ ರಾಯ್ ಅವರು ಶುಕ್ರವಾರ ಹಠಾತ್ತನೆ ಇಹಲೋಕ ತ್ಯಜಿಸಿದ್ದಾರೆ. ಅವರ ಈ ನಿರ್ಧಾರ ಇಡೀ ಉದ್ಯಮ ಲೋಕವನ್ನು ಬೆಚ್ಚಿಬೀಳಿಸಿದೆ.
ಬೆಂಗಳೂರಿನಲ್ಲಿ ಪ್ರತಿಷ್ಠಿತ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಸಿಜೆ ರಾಯ್, ತಮ್ಮ ಕಠಿಣ ಪರಿಶ್ರಮದಿಂದ ಸಾವಿರಾರು ಕೋಟಿ ರೂಪಾಯಿಗಳ ಒಡೆಯರಾಗಿದ್ದರು. ಆದರೆ, ಯಶಸ್ಸಿನ ಶಿಖರದಲ್ಲಿದ್ದಾಗ ಅವರ ಜೀವನದಲ್ಲಿ ವಿಧಿಯಾಟ ಬೇರೆಯೇ ಆಗಿತ್ತು.
ಐಟಿ ದಾಳಿಯ ಕರಿನೆರಳು: ಕಳೆದ ಕೆಲವು ಸಮಯದಿಂದ ಆದಾಯ ತೆರಿಗೆ ಇಲಾಖೆಯ ಹದ್ದುಗಣ್ಣು ಸಿಜೆ ರಾಯ್ ಅವರ ಮೇಲೆ ಬಿದ್ದಿತ್ತು. ಅವರ ಕುಟುಂಬ ಮತ್ತು ಉದ್ಯಮಗಳ ಮೇಲೆ ಪದೇ ಪದೇ ನಡೆದ ಐಟಿ ದಾಳಿಗಳು ಅವರನ್ನು ಮಾನಸಿಕವಾಗಿ ಕುಗ್ಗಿಸಿತ್ತು ಎಂದು ಹೇಳಲಾಗುತ್ತಿದೆ. ನಿರಂತರ ಒತ್ತಡ ಮತ್ತು ಭಯದಿಂದ ಅವರು ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂಬ ಅನುಮಾನಗಳು ಬಲವಾಗಿ ಕೇಳಿಬರುತ್ತಿವೆ.
ಅವರ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಒಬ್ಬ ಯಶಸ್ವಿ ಉದ್ಯಮಿ, ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾತ, ಇಂತಹ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಗೆ ತಲುಪಿದ್ದು ಯಾಕೆ? ಅವರ ಸಾವಿನ ಹಿಂದಿನ ನಿಜವಾದ ಕಾರಣವೇನು? ಪೊಲೀಸ್ ತನಿಖೆಯಿಂದಷ್ಟೇ ಸತ್ಯ ಹೊರಬರಬೇಕಿದೆ.