Published
1 month agoon
By
Akkare News
ಮರು ಮತ ಎಣಿಕೆಯಲ್ಲಿ ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ.
ಮರು ಮತ ಎಣಿಕೆಯಲ್ಲಿ ನಂಜೇಗೌಡ 50,957 ಮತಗಳನ್ನು ಮತ್ತು ಮಂಜುನಾಥ ಗೌಡ 50,707 ಮತಗಳನ್ನು ಪಡೆದಿದ್ದಾರೆ. ಎಣಿಕೆ ಪ್ರಕ್ರಿಯೆಯ ವಿಡಿಯೋ ರೆಕಾರ್ಡಿಂಗ್ ಕಡ್ಡಾಯವೇ ಅಥವಾ ಇಲ್ಲವೇ ಎಂಬುದರ ಕುರಿತು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುತ್ತಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕಾನೂನುಬದ್ದವಾಗಿ ನಡೆದಿಲ್ಲ, ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠವು ನಂಜೇಗೌಡ ಆಯ್ಕೆಯನ್ನು ಅಸಿಂಧುಗೊಳಿಸಿತ್ತು. ಇದನ್ನು ಪ್ರಶ್ನೆ ಮಾಡಿ ಶಾಸಕರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಪುನಃ ಎಣಿಕೆ ಮಾಡಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸದ್ಯ ಸುಪ್ರೀಂ ಕೋರ್ಟ್ ಫಲಿ