Connect with us

ಇತರ

ಕೇಪು ಕೋಳಿ ಅಂಕ ಪ್ರಕರಣ: ಶಾಸಕ ಅಶೋಕ್‌ ಕುಮಾರ್ ರೈ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ *ಹೈಕೋರ್ಟ್ ಆದೇಶ

Published

on

ಪುತ್ತೂರು:ಕೇಪುವಿನಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಕೋಳಿ ಅಂಕ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ದಿನಾಂಕ 20-12-2025ರಂದು ಮಧ್ಯಾಹ್ನ ಸಮಯ, ಬಂಟ್ವಾಳ ಕೇಪು ಗ್ರಾಮದ ಕೇಪು ಎಂಬಲ್ಲಿ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ಆಡಲು ಮುಂದಾಗುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಠಾಣಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಲವು ಜನರು ಕೋಳಿ ಅಂಕಕ್ಕೆ ಬಳಸುವ ಕೋಳಿಗಳನ್ನು ಹಿಡಿದುಕೊಂಡು ಗುಂಪು ಸೇರಿರುವುದು ಕಂಡುಬಂದಿತ್ತು. ಅಲ್ಲಿ ಸೇರಿದ್ದ ಜನರಿಗೆ ಕಾನೂನುಬಾಹಿರ ಕೋಳಿ ಅಂಕದ ಬಗ್ಗೆ ಸೂಕ್ತ ಕಾನೂನು ತಿಳುವಳಿಕೆ ನೀಡಲಾಗಿತ್ತು. ಈ ವೇಳೆ ಸದ್ರಿ ಸ್ಥಳದಲ್ಲಿ ಹಾಜರಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು, ಸ್ಥಳದಲ್ಲಿ ಸೇರಿದ್ದ ಜನರಿಗೆ ಕಾನೂನು ಬಾಹಿರವಾದ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಟೇರಣೆ ನೀಡಿದ್ದು, ಸ್ಥಳದಲ್ಲಿ ಸೇರಿದ್ದ ಜನರು ಕಾನೂನು ಬಾಹಿರವಾಗಿ ಕೋಳಿ ಅಂಕ ಆಟವನ್ನು ಪ್ರಾರಂಭಿಸಿರುತ್ತಾರೆ.

ಈ ವೇಳೆ ವಿಟ್ಲ ಪೊಲೀಸ್‌ ಠಾಣಾ ಪೊಲೀಸ್ ನಿರೀಕ್ಷಕರು ಅಗತ್ಯ ಪೊಲೀಸ್‌ ಭದ್ರತೆಯನ್ನು ಏರ್ಪಡಿಸಿ, ಸದ್ರಿ ಕಾನೂನು ಬಾಹಿರವಾಗಿ ಕೋಳಿ ಅಂಕ ಆಟ ಆಡುತ್ತಿದ್ದ 16 ಜನರನ್ನು ವಶಕ್ಕೆ ಪಡೆದು, 22 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಬಾಳು (ಕತ್ತಿಗಳನ್ನು) ಸ್ವಾಧೀನಪಡಿಸಿರುತ್ತಾರೆ
ಮರಳೀಧರ ರೈ ಎಂಬವರು ತಮ್ಮ ಬಾಬು ಜಾಗದಲ್ಲಿ ಯಾವುದೇ ಸೂಕ್ತ ಪರವಾನಿಗೆ ಪಡೆಯದೇ ಕಾನೂನು ಬಾಹಿರ ಕೃತ್ಯಕ್ಕೆ ಅನುವು ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ, ಕಾನೂನು ಬಾಹಿರ ಕೃತ್ಯವನ್ನು ನಡೆಸಲು ಪ್ರಚೋದನೆ ಮತ್ತು ದುಷ್ಟೇರಣೆಯನ್ನು ನೀಡಿದ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಶಾಸಕ ಅಶೋಕ್ ಕುಮಾರ್ ರೈಯವರ ವಿರುದ್ಧ ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 16 ಜನರ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಕಲಂ 189(2),49,221.223,190)222-2023, ಆಫ್ ಕ್ರೂಯೆಲ್ಲಿ ಟು ಎನಿಮಲ್ಸ್ ಆ್ಯಕ್ಟ್-1960(ಯು/23,11) 03 (5. 5.190/2025) ದಾಖಲಾಗಿದೆ.

ಪ್ರಕರಣ ರದ್ದತಿಗೆ ಶಾಸಕರ ಮೇಲ್ಮನವಿ:
ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಶಾಸಕ ಅಶೋಕ್ ಕುಮಾರ್ ರೈಯವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆಗೆತ್ತಿಕೊಂಡಿರುವ ನ್ಯಾಯಪೀಠ, ಈ ಪ್ರಕರಣದಲ್ಲಿ ಮುಂದಿನ ಆದೇಶದ ತನಕ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿದೆ. ಪ್ರಕರಣದಲ್ಲಿ ದೂರುದಾರ ಶಾಸಕರ ಪರವಾಗಿ ಹೈಕೋರ್ಟ್‌ನ ಹಿರಿಯ ವಕೀಲ ಅರುಣ್ ಶ್ಯಾಂ ಪುತ್ತೂರು ಅವರು ವಾದಿಸುತ್ತಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement