Published
4 weeks agoon
By
Akkare News
ಪುತ್ತೂರು ಫೆಬ್ರವರಿ. 6 : ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಾಂಚನ ಬಜತ್ತೂರು ಗ್ರಾಮದಲ್ಲಿ ಕಾಂಚನ ಶ್ರೀ ಲಕ್ಷ್ಮೀನಾರಾಯಣ ಮ್ಯೂಸಿಕ್ ಅಕಾಡೆಮಿ ಟ್ರಸ್ಟ್(ರಿ) ಅವರ ನೂತನ ಸಂಗೀತ ಕಲಾಶಾಲೆ, ಸಭಾಭವನ ಹಾಗೂ ಭೋಜನಶಾಲೆಯನ್ನು ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಲೋಕಾರ್ಪಣೆ ಮಾಡಿ, 72ನೇ ವರ್ಷದ ಕಾಂಚನೋತ್ಸವ -2026 ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದರು.


ಮಾತನಾಡಿದ ಶಿವಕುಮಾರ್ ಅವರು ನೂತನ ಸೌಕರ್ಯಗಳು ವಿದ್ಯಾರ್ಥಿಗಳಿಗೆ, ಕಲಾವಿದರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೆ ಬಲ ನೀಡಲಿ ಎಂದು ಶುಭ ಹಾರೈಸಿದರು ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಭಾಗವಹಿಸಿದರು.







