Connect with us

ಇತರ

ಪುತ್ತೂರು:ಗಾಂಜಾ ಪೂರೈಕೆ ಮಾಡುತ್ತಿದ್ದ ಒರಿಸ್ಸಾ ದ ವ್ಯಕ್ತಿ ಬಂದನ

Published

on

ಪುತ್ತೂರು: ಗಾಂಜಾ ಪೂರೈಕೆ ಮಾಡುತ್ತಿದ್ದ ಒರಿಸ್ಸಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳ ಬಂಧನ ಮೂರು ವಾರಗಳ ಹಿಂದೆ ರೂ.53,03,000 ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ ಕೆ (27), ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42), ಆರೋಪಿಗಳಿಗೆ ಮಾದಕವಸ್ತು ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ರಾಜ್ಯದ ದೀಪಕ್ ಪಾತ್ರ (37) ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಪ್ರಮೋದ್ ಕುಮಾರ್ ನೇತೃತ್ವದಲ್ಲಿ, ತನಿಖಾ ತಂಡವು ಒರಿಸ್ಸದಲ್ಲಿ ಬಂಧಿಸಿದೆ.

ಆರೋಪಗಳಿಂದ ರೂ 80,೦00 ಮೌಲ್ಯದ, 1 ಕೆ.ಜಿ 788 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ ಕಾರ್ಯಾಚರಣೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ ಹಾಗೂ ಸಿಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೆನ್, ಸುರೇಶ ಹಾಗೂ ದಿವ್ಯಾಪ್ರಕಾಶ್ ಪಾಲ್ಗೊಂಡಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement