Connect with us

ಅಪಘಾತ

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಕ್ಷಣಾರ್ಧದಲ್ಲಿ ಕಾರು ಭಸ್ಮ

Published

on

ಕೊಡಗು: ನಗರದ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಎನ್‌ಎಚ್‌ಎಐ 275ರಲ್ಲಿ‌ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್‌ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ರವಿವಾರ ಮುಂಜಾನೆ  ಸಂಭವಿಸಿದೆ.

ಸಂಚಾರದಲ್ಲಿದ್ದಾಗಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬಗ್ಗೆ ಗಮನಕ್ಕೆ ಬರುತ್ತಿದ್ದಂತೆ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣ ಭಸ್ಮವಾಗಿದೆ.

ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version