Connect with us

ಇತರ

ಬೆಳ್ತಂಗಡಿ – ಕಾಲೇಜಿಗೆ ತೆರಳುತ್ತಿದ್ದ ಯುವತಿಯ ಅಪಹರಣಕ್ಕೆ ಯತ್ನ- ಆರೋಪಿಗಳು ಪರಾರಿ

Published

on

ಮಂಗಳೂರು ಫೆಬ್ರವರಿ 9 : ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿ‌ನ ಸುದೆಮುಗೇರು ಎಂಬಲ್ಲಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.‌ ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿನಿ ಬಳಿಯಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿಯಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದಿನಂತೆ ಸೋಮವಾರ ಬೆಳಿಗ್ಗೆ 8:30ರ ಸುಮಾರಿಗೆ ತನ್ನ ಸ್ಕೂಟರ್‌ನಲ್ಲಿ ಸಂತೆಕಟ್ಟೆ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಸ್ಕೂಟರ್ ಅನ್ನು ಅಡ್ಡಗಟ್ಟಿದ್ದಾರೆ. ಕಾರಿನ ನಂಬರ್ ಪ್ಲೇಟ್ ಗೆ ಬಟ್ಟೆ ಕಟ್ಟಿದ್ದು ಅದರಲ್ಲಿ ಮೂವರು ದುಷ್ಕರ್ಮಿಗಳು ಕೂಡ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದರೆಂದು ತಿಳಿದುಬಂದಿದೆ. ‌ಬಾಲಕಿಯನ್ನು ಕಾರಿನ ಒಳಗೆ ಎಳೆಯಲು ಯತ್ನಿಸಿದಾಗ, ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿದ್ದಾಳೆ. ಇದೇ ವೇಳೆ, ಹಿಂಭಾಗದಿಂದ ಸ್ಕೂಟರ್ ಬರುವುದನ್ನು ನೋಡಿ ದುಷ್ಕರ್ಮಿಗಳು ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ.‌ ಯುವತಿಯ ಕೈಗೆ ಮತ್ತು ಬೆರಳಿಗೆ ಚೂರಿಯಿಂದ ಚುಚ್ಚಿದ ಗಾಯವಾಗಿದ್ದು ಕಾಲೇಜು ಬ್ಯಾಗ್ ನೊಂದಿಗೆ ಯುವಕರು ಕಾರಿನಲ್ಲಿ ಪರಾರಿಯಾಗಿದ್ದಾರೆ.‌

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version