Connect with us

ಇತರ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ ಇನ್ನೂ ₹2 ಕೋಟಿ ಅನುದಾನ: ಶಾಸಕ ಅಶೋಕ್ ರೈ

Published

on

ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮುಖಂಡರಾದ ಕಾವು ಹೇಮನಾಥ ಶೆಟ್ಟಿ, ಎಂ.ಎಸ್.ಮಹಮ್ಮದ್, ಕೃಷ್ಣಪ್ರಸಾದ್ ಆಳ್ವ, ಫಾರೂಕ್ ಬಾಯಬ್ಬೆ, ಯು.ಟಿ.ತೌಸೀಫ್‌, ನಿಹಾಲ್ ಪಿ. ಶೆಟ್ಟಿ, ಅನ್ವರ್ ಖಾಸಿಂ, ಶ್ರೀಪ್ರಸಾದ್ ಪಾಣಾಜೆ, ಚಂದ್ರಪ್ರಭಾ ಗೌಡ, ಫಾರೂಕ್ ಪೆರ್ನೆ, ಅಖಿಲ್ ಕಲ್ಲಾರೆ ಭಾಗವಹಿಸಿದ್ದರು
ಬೀರಮಲೆ ಬೆಟ್ಟದ ಅಭಿವೃದ್ಧಿಗೆ ಈಗಾಗಲೇ ₹ 2 ಕೋಟಿ ಅನುದಾನ ನೀಡಿದ್ದು, ಈ ಪೈಕಿ ₹ 1 ಕೋಟಿಯ ಕೆಲಸ ಆಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿಯಾಗಿ ₹ 2 ಕೋಟಿ ಅನುದಾನ ನೀಡಲಾಗುವುದು. ಬೆಟ್ಟದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿ ಎಂದು ಶಾಸಕ ಅಶೋಕ್ ರೈ ಹೇಳಿದರು.
ಪುತ್ತೂರು ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆ ಸಮಿತಿ ಆಶ್ರಯದಲ್ಲಿ ಬೀರಮಲೆ ಬೆಟ್ಟದಲ್ಲಿ ನಡೆದ ಗಾಳಿಪಟ ಸ್ಪರ್ಧೆ, ಫುಡ್ ಕೋರ್ಟ್‌ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡ ‘ಬೀರಮಲೆ ಉತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.

ತಹಶೀಲ್ದಾರ್ ಆಗಿದ್ದ ಕೋಚಣ್ಣ ರೈ ಅವರು ಬೀರಮಲೆ ಬೆಟ್ಟದ ಅಭಿವೃದ್ಧಿಯ ಕನಸು ಕಂಡಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಬೀರಮಲೆ ಬೆಟ್ಟ ಅಭಿವೃದ್ಧಿ ಯೋಜನೆ ಸಮಿತಿ ಅಧ್ಯಕ್ಷ ಎ.ಜಗಜೀವನ್‌ದಾಸ್‌ ರೈ ಮಾತನಾಡಿ, ಮುಂದಿನ ದಿನಗಳಲ್ಲಿ ಬೀರಮಲೆ ಬೆಟ್ಟ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಆಗಬೇಕಿದ್ದು, ಬೆಟ್ಟವನ್ನು ಪ್ರವಾಸೋದ್ಯಮ ತಾಣವಾಗಿ ಪರಿವರ್ತನೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದರು.

ಬೀರಮಲೆ ಬೆಟ್ಟದ ಪ್ರೇಮಿಯಾಗಿರುವ ಅವಿನಾಶ್ ಸ್ವಂತ ವೆಚ್ಚದಲ್ಲಿ ತಯಾರಿಸಿದ ಬೀರಮಲೆ ಬೆಟ್ಟ ಅಭಿವೃದ್ಧಿ ಯೋಜನೆಯ ವೆಬ್‌ಸೈಟನ್ನು ಅಶೋಕ್ ರೈ ಅನಾವರಣಗೊಳಿಸಿದರು. ಬೀರಮಲೆ ಬೆಟ್ಟದ ಅಭಿವೃದ್ಧಿಗೆ ಅನುದಾನ ಒದಗಿಸಿದ ಶಾಸಕ ಅಶೋಕ್ ರೈ, ಬೀರಮಲೆ ಬೆಟ್ಟ ಅಭಿವೃದ್ಧಿ ಯೋಜನೆಗೆ ಸಹಕಾರ ನೀಡುವುದರೊಂದಿಗೆ 16 ಮಂದಿ ವಿಶೇಷ ಚೇತನರನ್ನು ಸಲಹುತ್ತಿರುವ ಪ್ರಜ್ಞಾ ಆಶ್ರಮದ ಅಣ್ಣಪ್ಪ ಅವರನ್ನು ಸನ್ಮಾನಿಸಲಾಯಿತು.

ಪುತ್ತೂರು ಡಿವೈಎಸ್‌ಪಿ ಪ್ರಮೋದ್ ಕುಮಾರ್, ಪುತ್ತೂರು ಎಸಿಎಫ್ ಸುಬ್ಬಯ್ಯ, ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಷ್ ರೈ ಬೆಳ್ಳಿಪ್ಪಾಡಿ, ಬೀರಮಲೆ ಬೆಟ್ಟ ಅಭಿವೃದ್ಧಿ ಯೋಜನೆಯ ಉಪಾಧ್ಯಕ್ಷೆ ಡಾ.ಸತ್ಯವತಿ ಆಳ್ವ, ಕಾರ್ಯದರ್ಶಿ ನಿತಿನ್ ಪಕ್ಕಳ, ಕಾರ್ಯಕಾರಿ ಸಮಿತಿ ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಶಿವರಾಮ ಆಳ್ವ, ಕೇಶವ ನಾಯಕ್, ಜೈರಾಜ್ ಭಂಡಾರಿ ಭಾಗವಹಿಸಿದ್ದರು. ಉಪಾಧ್ಯಕ್ಷ ಪ್ರೊ.ಝೇವಿಯರ್ ಡಿ‌ಸೋಜ ನಿರೂಪಿಸಿ, ವಂದಿಸಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version