Connect with us

ಇತರ

ಉಪ್ಪಿನಂಗಡಿ: ಎಂ.ಡಿ.ಎಂ.ಎ. ಸಹಿತ ಆರೋಪಿ ಬಂಧನ

Published

on

ಉಪ್ಪಿನಂಗಡಿ: ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ತಂಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು, ಆತನಿಂದ ಎಂ.ಡಿ.ಎಂ.ಎ. ಮಾದಕ ವಸ್ತು ಹಾಗೂ ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ.

ದಿನಾಂಕ 10.02.2026 ರಂದು ಸಂಜೆ 6 ಗಂಟೆ ಸುಮಾರಿಗೆ ಉಪ್ಪಿನಂಗಡಿ ಗ್ರಾಮದ ಪಂಜಳ ಪ್ರದೇಶದಲ್ಲಿ ರೌಂಡ್ಸ್ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ಯಹ್ಯಾ ಕೊಕ್ಕಡ (48) ಅವರನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು. ವಿಚಾರಣೆ ವೇಳೆ ಆತನು ಮಾರಾಟ ಉದ್ದೇಶದಿಂದ ಎಂ.ಡಿ.ಎಂ.ಎ. ಹೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಚರ ಸಮ್ಮುಖದಲ್ಲಿ ನಡೆಸಿದ ಮಹಜರಿನಲ್ಲಿ ಆತನಿಂದ 2.16 ಗ್ರಾಂ ಎಂ.ಡಿ.ಎಂ.ಎ. (ಅಂದಾಜು ಮೌಲ್ಯ ₹3,000), ಒಂದು ಐಫೋನ್ (₹45,000) ಹಾಗೂ ಒಂದು ಸ್ಯಾಮ್ಸಂಗ್ ಕೀಪ್ಯಾಡ್ ಮೊಬೈಲ್ (₹1,000) ಸೇರಿದಂತೆ ಒಟ್ಟು ₹49,000 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಅ.ಕ್ರ. 19/2026) ದಾಖಲಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ), 22(ಬಿ) ಅಡಿಯಲ್ಲಿ ತನಿಖೆ ಮುಂದುವರಿದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement