Published
3 weeks agoon
By
Akkare News
ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ.
ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ.
ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ.