Published
3 weeks agoon
By
Akkare News
ಪುತ್ತೂರು: ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ (ಗ್ರಾಮಾಂತರ) ಹಾಗು ಪುತ್ತೂರು ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಗ್ರಹಣ ಹಾಗು ಕಾರ್ಯಕರ್ತರ ಸಮಾವೇಶ ಫೆ.16ರಂದು ಬೆಳಿಗ್ಗೆ ಗಂಟೆ 10ಕ್ಕೆ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಪಕ್ಷದ ಸಿದ್ದಾಂತ, ಸರಕಾರದ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತುಕೊಡುವ ನಿಟ್ಟಿನಲ್ಲಿ ಮತ್ತು ಜನರಿಗೆ ಮನಮುಟ್ಟುವಂತೆ ಪ್ರಚಾರ ಪಡಿಸುವ ನಿಟ್ಟಿನಲ್ಲಿ ಸಮಿತಿ ರಚನೆಯಾಗಿದೆ. ಪುತ್ತೂರು, ಬಂಟ್ವಾಳ, ಬೆಳಗಂಡಿ, ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟು ದ.ಕ.ಜಿಲ್ಲಾ ಗ್ರಾಮಾಂತರ ಅಧ್ಯಕ್ಷನಾಗಿ ನಾನು ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಅಧ್ಯಕ್ಷರ ನೇಮಕ ಆಗಿದೆ.
ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆ ವಹಿಸಲಿದ್ದಾರೆ.

ಪುತ್ತೂರು ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ರಾಜ್ಯ ಕೆಪಿಸಿಸಿಯ ವಕ್ತಾರ ಹಾಗು ಪ್ರಚಾರ ಸಮಿತಿ ಉಪಾಧ್ಯಕ್ಷ ಮುನೀರ್ ಅನ್ಸಾರೆ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ಸಂಯೋಜಕ ಸುಧೀರ್ ಕುಮಾರ್ ಮರೋಳಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಮಾಜಿ ಸಚಿವ ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ ಹರೀಶ್ ಕುಮಾರ್, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಶಾಸಕರಾಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷೆ ಶಕುಂತಳಾ ಶೆಟ್ಟಿ, ಜೆ.ಆರ್ ಲೋಬೋ, ಕೆಪಿಸಿಸಿ ಬೆಂಗಳೂರು ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ, ರಕ್ಷಿತ್ ಶಿವರಾಮ್, ಎಂ.ಎಸ್ ಮುಹಮ್ಮದ್, ದ.ಕ.ಜಿಲ್ಲಾ ಪಂಚಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ ಸಹಿತ 4 ವಿಧಾನಸಭಾ ಕ್ಷೇತ್ರದ 9 ಬ್ಲಾಕ್ ಅಧ್ಯಕ್ಷರುಗಳು ಮತ್ತು ಹಲವಾರು ಮಂದಿ ಕೆಪಿಸಿಸಿ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು








