Connect with us

ಇತರ

ಪುತ್ತೂರು : ಎರಡು ಮಸೀದಿಗೆ 55 ಲಕ್ಷ ರೂ ಅನುದಾನ ಮಂಜೂರು: ಶಾಸಕ ಅಶೋಕ್ ರೈ

Published

on

ಪುತ್ತೂರು: ಕರ್ನಾಟಕ ರಾಜ್ಯ ವಕ್ಫ್ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಮಸೀದಿಗೆ ಒಟ್ಟು 55 ಲಕ್ಷ ರೂ ಅನುದಾನ ಮಂಜೂರುಗೊಂಡಿದೆ ಎಂದು ಶಾಸಕ ಅಶೋಕ್ ರೈ ಅವರು ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ವಸತಿ ,ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್‌ರವರನ್ನು ಭೇಟಿಯಾದ ಶಾಸಕರು ಎರಡು ಮಸೀದಿಗೆ ಸಂಬಂಧಪಟ್ಟಂತೆ ಅಗತ್ಯ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕರ್ವೆಲು ಬದ್ರಿಯಾ ಜುಮಾ ಮಸೀದಿಯಲ್ಲಿ ನೂತನ ವಿಸ್ತೃತ ಕಟ್ಟಡ ನಿರ್ಮಾಣಕ್ಕೆ 35 ಲಕ್ಷ ಹಾಗೂ ಇಡ್ಕಿದು ಬದ್ರಿಯಾ ಜುಮಾ ಮಸೀದಿಯಲ್ಲಿ ಶೌಚಾಲಯ ಮತ್ತು ಶುದ್ದಕುಡಿಯುವ ನೀರಿನ ವ್ಯವಸ್ಥೆಗೆ 20 ಲಕ್ಷ ಅನುದಾನ ಮಂಜೂರುಗೊಂಡಿದೆ ಎಂದು ತಿಳಿಸಿದ್ದಾರೆ. ಕಳೆದ ಕೆಲದಿನಗಳ ಹಿಂದೆ ಕರ್ವೆಲು ಮಸೀದಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ತೆರಳಿದ್ದ ಶಾಸಕರು ಮಸೀದಿಗೆ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement