Connect with us

ರಾಜಕೀಯ

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಕೇಸು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌

Published

on

ಬಿಜೆಪಿ ವಿರುದ್ಧದ “40% ಕಮಿಷನ್” ಜಾಹೀರಾತುಗಳ ಕುರಿತು ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದು, ವಿಚಾರಣೆಯನ್ನು ಮುಂದುವರಿಸಲು ಅವಕಾಶ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮಾನವಾಗುತ್ತದೆ ಎಂದು ಹೈಕೋರ್ಟ್‌ ನ್ಯಾಯಪೀಠ ಹೇಳಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಅರ್ಜಿಯನ್ನು ಪುರಸ್ಕರಿಸಲಾಗಿದೆ. ವಿಚಾರಣೆಯನ್ನು ಮುಂದುವರಿಸಲು ಅವಕಾಶ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ. ಅರ್ಜಿದಾರರಾದ (ರಾಹುಲ್ ಗಾಂಧಿ) ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲಾಗಿದೆ,” ಎಂದು ನ್ಯಾಯಾಲಯ ಆದೇಶಿಸಿತು.

ಆಕ್ಷೇಪಾರ್ಹ ಹಾಗೂ ವಿವಾದಿತ ಜಾಹೀರಾತುಗಳಲ್ಲಿ ಕೆಲವು ಸಾಂವಿಧಾನಿಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಸರ್ಕಾರಿ ಯೋಜನೆಗಳಲ್ಲಿನ ಅಕ್ರಮಗಳ ಫಲಾನುಭವಿಗಳೆಂದು ಆರೋಪಿಸಲಾಗಿದೆ ಎಂದು ನ್ಯಾಯಾಲಯ ಗಮನಿಸಿದೆ. ಆದರೆ ಜಾಹೀರಾತುಗಳಲ್ಲಿ ಉಲ್ಲೇಖಿಸಲಾದ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳು ಮಾನನಷ್ಟ ದೂರು ನೀಡಿಲ್ಲ; ಬದಲಾಗಿ ಬಿಜೆಪಿ ದೂರು ನೀಡಿದೆ ಎಂಬುದನ್ನು ನ್ಯಾಯಾಲಯ ಗಮನಿಸಿತು.

ಪ್ರಸ್ತುತ ಪ್ರಕರಣದಲ್ಲಿ ಆರೋಪವು ಸ್ವತಃ ವ್ಯಂಗ್ಯೋಕ್ತಿಯ ರೂಪದಲ್ಲಿದ್ದು, ಅದನ್ನು ಪಕ್ಷಕ್ಕೂ ವಿಸ್ತರಿಸಲು ಪ್ರಯತ್ನಿಸಲಾಗುತ್ತಿದೆ,” ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್ ಪ್ರತಿನಿಧಿಸಿರುವ ಬಿಜೆಪಿ, ರಾಹುಲ್ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಪ್ರಕಟಿಸಿದ್ದ ಜಾಹೀರಾತುಗಳು ಮತ್ತು ಪ್ರಚಾರ ಘೋಷಣೆಗಳು ಈ ವಿವಾದದ ಕೇಂದ್ರವಾಗಿದ್ದವು.

Continue Reading
Click to comment

Leave a Reply

Your email address will not be published. Required fields are marked *

Advertisement