Connect with us

ರಾಜಕೀಯ

ಸಚಿವ ಸ್ಥಾನಕ್ಕಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ 31 ಶಾಸಕರಿಂದ ಹೈಕಮಾಂಡ್‌ಗೆ ಪತ್ರ : ರಾಜಕೀಯದಲ್ಲಿ ಹೊಸ ಸಂಚಲನ

Published

on

ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆಯ ಕೂಗು ಜೋರಾಗಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಮೊದಲ ಬಾರಿ ಆಯ್ಕೆಯಾಗಿರುವ 31 ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್_ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. 2023ರ ಚುನಾವಣೆಯಲ್ಲಿ ಮೊದಲ ಬಾರಿಗೆ 38 ಯುವ ಶಾಸಕರು ಆಯ್ಕೆಯಾಗಿದ್ದು, ಇದು ಜನ ಬದಲಾವಣೆಯನ್ನು ಬಯಸಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಆದ್ದರಿಂದ, ಮುಂಬರುವ ಸಂಪುಟ ಪುನಾರಚನೆಯಲ್ಲಿ ಕನಿಷ್ಠ ಐವರು ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಯುವ ನಾಯಕತ್ವಕ್ಕೆ ಆದ್ಯತೆ ನೀಡುವ ಮೂಲಕ 2028ರ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕು ಎಂದು ಶಾಸಕರು ಈ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಬೆಳವಣಿಗೆಯು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಚರ್ಚೆಯ ಬೆನ್ನಲ್ಲೇ ನಡೆದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಪತ್ರಕ್ಕೆ ಸಹಿ ಹಾಕಿರುವ ಶಾಸಕರಾದ ಪ್ರದೀಪ್ ಈಶ್ವರ್, ಇಕ್ಬಾಲ್ ಹುಸೇನ್ ಮತ್ತು ಎ.ಎಸ್. ಪೊನ್ನಣ್ಣ ಅವರಂತಹ ನಾಯಕರು, “ಹೊಸಬರಿಗೆ ಅವಕಾಶ ನೀಡುವುದು ಈ ಕ್ಷಣದ ಅಗತ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಬೆಂಗಳೂರಿಗೆ ಭೇಟಿ ನೀಡಿದ ಸಮಯದಲ್ಲಿಯೇ ಈ ‘ಪತ್ರ ಸ್ಫೋಟ’ ಸಂಭವಿಸಿರುವುದು ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿರುವುದನ್ನು ಸ್ಪಷ್ಟಪಡಿಸುತ್ತಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement