Published
1 week agoon
By
Akkare News
ಗುಡ್ ನ್ಯೂಸ್ : ಕರಾವಳಿ ಭಾಗದ ಜನರಿಗೆ ಗುಡ್ ನ್ಯೂಸ್‌ವೊಂದು ಇದೆ. ದಕ್ಷಿಣ ಕನ್ನಡದಲ್ಲಿ ಕೆಎಸ್‌ಆರ್‌ಟಿಸಿ ವಿವಿಧ ಮಾರ್ಗಗಳಲ್ಲಿ 100 ಎಲೆಕ್ಟ್ರಿಕ್ ಬಸ್ಸುಗಳನ್ನು ಓಡಿಸಲು ಸಿದ್ಧತೆ ನಡೆಸುತ್ತಿರುವ ನಡುವೆಯೇ, ಖಾಸಗಿ ಸಾರಿಗೆ ಸಂಸ್ಥೆ ಕೂಡ ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸಲು ಮುಂದಾಗಿದೆ.
ಹಾಗಾದ್ರೆ, ಯಾವಾಗಿನಿಂದ, ಯಾವೆಲ್ಲಾ ಮಾರ್ಗಗಳಲ್ಲಿ ಆರಂಭ? ಹಾಗೂ ಈ ಮಹತ್ವದ ನಿರ್ಧಾರ ಯಾಕೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಮಂಗಳೂರಿನ ಮಂಗಳಾದೇವಿ ದೇವಸ್ಥಾನದಿಂದ ಪ್ರಾರಂಭವಾಗುವ ರೂಟ್ ನಂ. 27ರಲ್ಲಿ ಖಾಸಗಿ ಎಲೆಕ್ಟ್ರಿಕ್ ಬಸ್ ಒಂದು ವಾರದೊಳಗೆ ಸಂಚಾರ ಆರಂಭಿಸುವ ಸಾಧ್ಯತೆಯಿದೆ. ಇದು ನಗರ ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ ಎಂದು ಹೇಳಲಾಗುತ್ತಿದೆ.
ಎಲೆಕ್ಟ್ರಿಸ್ ಬಸ್ ಸೇವೆಯ ಉದ್ದೇಶವೇನು?
ಎಲೆಕ್ಟ್ರಿಕ್ ಬಸ್‌ಗಳ ಪರಿಚಯದಿಂದ ಇಂಧನ ವೆಚ್ಚ ಕಡಿಮೆ ಆಗುವುದರ ಜೊತೆಗೆ ವಾಯು ಮಾಲಿನ್ಯವೂ ತಗ್ಗಲಿದೆ ಎಂಬ ನಿರೀಕ್ಷೆಯಿದೆ. ಸಾರ್ವಜನಿಕರಿಗೆ ಸುಗಮ, ಪರಿಸರ ಸ್ನೇಹಿ ಪ್ರಯಾಣದ ಅನುಭವ ಒದಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಪರಿಸರ ಸ್ನೇಹಿ ವಾಹನಗಳನ್ನು ಪರಿಚಯಿಸುವ ಮೂಲಕ ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭಿಸುವತ್ತ ಖಾಸಗಿ ವಲಯವೂ ಮುಂದಾಗಿದೆ. ಇದರಿಂದ ಕರಾವಳಿ ಭಾಗದಲ್ಲಿ ಪರಿಸರ ಸಂರಕ್ಷಣೆಗೂ ಉತ್ತೇಜನ ಸಿಗುವ ಜೊತೆಗೆ, ಪ್ರಯಾಣಿಕರಿಗೆ ಆಧುನಿಕ ಹಾಗೂ ಸುಗಮ ಸಾರಿಗೆ ಸೇವೆ ದೊರೆಯಲಿದೆ ಎನ್ನಲಾಗುತ್ತಿದೆ.

ದಿಲ್ರಾಜ್ ಆಳ್ವಾ ಹೇಳಿದ್ದೇನು?
ಸಾಮಾನ್ಯ ಡೀಸೆಲ್ ಬಸ್‌ಗಳ ಬದಲು ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸುವತ್ತ ಖಾಸಗಿ ಸಾರಿಗೆ ಸಂಸ್ಥೆ ಆಸಕ್ತಿ ತೋರಿದೆ. ಸ್ಥಿರ ಮತ್ತು ಶಾಶ್ವತ ಸಾರಿಗೆ ವ್ಯವಸ್ಥೆಯತ್ತ ಸಾಗುವ ಮಹತ್ವದ ಹೆಜ್ಜೆಯಾಗಿ ಇದನ್ನು ಪರಿಗಣಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲೀಕರ ಸಂಘದ ಮಾಜಿ ಅಧ್ಯಕ್ಷ ದಿಲ್ರಾಜ್ ಆಳ್ವಾ ಅವರ ಮಾಹಿತಿ ಪ್ರಕಾರ, ಹೊಸ ಎಲೆಕ್ಟ್ರಿಕ್ ಬಸ್ ಇನ್ನೂ ಕೆಲವು ದಿನಗಳಲ್ಲಿ ಮಂಗಳೂರಿಗೆ ತಲುಪುವ ನಿರೀಕ್ಷೆಯಿದ್ದು, ಫೆಬ್ರವರಿ 26ರಿಂದ ಸಂಚಾರ ಆರಂಭಿಸಲು ಯೋಜಿಸಲಾಗಿದೆ.

ಮತ್ತಷ್ಟು ಎಲೆಕ್ಟ್ರಿಕ್ ಬಸ್‌ಗಳನ್ನ ಪರಿಚಯಿಸುವ ಪ್ಲ್ಯಾನ್
ನಗದ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಕಡೆಗೆ ಸಾಗುವ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ವಿವರಿಸಿದ್ದಾರೆ. ಇನ್ನೂ ಈ ಎಲೆಕ್ಟ್ರಿಕ್ ಬಸ್‌ಗೆ ಅಗತ್ಯವಿರುವ ಆರಂಭಿಕ ಚಾರ್ಜಿಂಗ್ ವ್ಯವಸ್ಥೆ ನಗರದಲ್ಲೇ ಲಭ್ಯವಿದೆ. ಇನ್ನೂ ಹಲವರು ಸೇರಿ ಒಟ್ಟಾಗಿ ಮತ್ತಷ್ಟು ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸುವ ಯೋಜನೆಯೂ ಇದೆ ಎಂದು ಸುಳಿವು ನೀಡಿದ್ದಾರೆ.
ತಕ್ಷಣದ ಆರ್ಥಿಕ ಲಾಭಕ್ಕಿಂತ ಪರಿಸರ ರಕ್ಷಣೆಗೆ ಹೆಚ್ಚು ಅದ್ಯತೆ ನೀಡಬೇಕಿದೆ. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಈ ಯೋಜನೆ ಕೈಗೊಳ್ಳಲಾಗಿದೆ. ಇನ್ನೂ ಐದು ಬಸ್ ಸಂಚಾಲಕರು ಒಟ್ಟಾಗಿ ‘ಚಾರ್ಜ್ ಮೊಬಿಲಿಟಿ ಪ್ರೈವೇಟ್ ಲಿಮಿಟೆಡ್’ ಎಂಬ ಕಂಪನಿಯನ್ನು ಆರಂಭಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪರಿಸರ ಸ್ನೇಹಿ ವಾಹನಗಳನ್ನು ಪರಿಚಯಿಸುವ ಉದ್ದೇಶ ಅವರದ್ದಾಗಿದೆ ಎಂದು ಹೇಳಿದ್ದಾರೆ.

ಮತ್ತೊಂದೆಡೆ, ಪಿಎಂ-ಇಬಸ್ ಸೇವಾ ಯೋಜನೆಯಡಿ ಮಂಜೂರಾದ 100 ಎಲೆಕ್ಟ್ರಿಕ್ ಬಸ್‌ಗಳನ್ನು ಓಡಿಸಲು ಮಂಗಳೂರು ವಿಭಾಗ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಸಾರ್ವಜನಿಕ ಹಾಗೂ ಖಾಸಗಿ ವಲಯ ಎರಡೂ ಸೇರಿ ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸಾರಿಗೆ ವ್ಯವಸ್ಥೆ ಬಲಪಡಿಸಲು ಮುಂದಾಗಿವೆ. ಒಟ್ಟಿನಲ್ಲಿ ಇದರಿಂದ ಕರಾವಳಿ ಭಾಗದ ಜನರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಈ ಬಸ್‌ಗಳ ಬರುವಿಕೆಗಾಗಿ ಕಾತರದಿಂದ ಕಾದಿದ್ದಾರೆ ಎಂದು ಹೇಳಲಾಗುತ್ತಿದೆ.






