Connect with us

ಹವಾಮಾನ

ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಯಲ್ಲೋ ಅಲರ್ಟ್ ಘೋಷಣೆ

Published

on

ಕೆಲ ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಒಣ ಹವೆ, ತಾಪಮಾನ ಹೆಚ್ಚಳವಾಗುತ್ತಿದ್ದರೆ ಮತ್ತೆ ಕೆಲ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಆರಂಭವಾಗಿದೆ. ಇಂದು ಕೂಡ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡು ಸಹಿತ ಮಲೆಯಾಗುವ ಸಾಧ್ಯತೆ ಇದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ , ಉಡುಪಿ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣವಿದ್ದು, ಇಂದೂ ಕೂಡ ಮುಂದುವರಿಯಲಿದೆ.

ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಜಿಲ್ಲೆಗಳಲ್ಲಿಯೂ ಇಂದು ಒಣ ಹವೆ ಇರಲಿದೆ.

ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಹೆಚ್ಚಾಗಲಿದ್ದು, ಬೆಂಗಳೂರು ನಗರದಲ್ಲಿ ತಾಪಮಾನ ಅಧಿಕ ಪ್ರಮಾಣದಲ್ಲಿ ಹೆಚ್ಚಲಿದೆ. ಇದರಿಂದ ಹೀಟ್ ಸ್ಟ್ರೋಕ್ ಆಗುವ ಸಾಧ್ಯತೆ ಇದ್ದು, ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement