Published
6 days agoon
By
Akkare News
ಬೆಂಗಳೂರು : ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣ ಬಳಕೆ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಬಗ್ಗೆ ಮಕ್ಕಳು, ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಕ್ಕಳಿಗೆ ಮೊಬೈಲ್ ಕೊಡುವವರೇ ಪೋಷಕರು. ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ದಾರಿ ತಪ್ಪುತ್ತಿರುವುದು ಇಡೀ ದೇಶದ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯಂತೆ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಆಂದೋಲನ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.


ಮೊಬೈಲ್ ನಿಷೇಧವನ್ನು ಕೇವಲ ತರಗತಿಗಳಿಗೆ ಸೀಮಿತಗೊಳಿಸದೇ ಜವಾಬ್ದಾರಿಯುತವಾಗಿ ಜಾರಿಗೆ ತರಬೇಕಿದೆ. ಈ ನಿಟ್ಟಿನಲ್ಲಿ ಮಕ್ಕಳು, ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.








