Connect with us

ಅಂತರರಾಷ್ಟ್ರೀಯ

ಅಮೇರಿಕಾ, ಇಸ್ರೇಲ್ ದಾಳಿ – ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವು – ಟ್ರಂಪ್ ಘೋಷಣೆ !

Published

on

ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದೃಢಪಡಿಸಿದ್ದಾರೆ.

ಇರಾನ್‌ನ ಮಿಲಿಟರಿ ನೆಲೆಗಳು ಮತ್ತು ಸರ್ಕಾರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ಈ ಹಿನ್ನಲೆಯಲ್ಲಿ ನಿನ್ನೆ (ಫೆ.28-ಶನಿವಾರ) ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು “ಅಮೆರಿಕ-ಇಸ್ರೇಲ್‌ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದೆ” ಎಂದು ಘೋಷಿಸಿದ್ದರು. ಇಸ್ರೇಲ್‌ ಮಾಧ್ಯಮಗಳು ಕೂಡ ಇದನ್ನು ದೃಢಪಡಿಸಿದ್ದವು. ಆದರೆ ಇರಾನ್‌ ಆಡಳಿತ ಈ ವರದಿಗಳನ್ನು ನಿರಾಕರಿಸಿತ್ತು. ಆದರೆ ಈಗ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (86) ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ.

ಮುಂದುವರರೆದು ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿರುವ ಟ್ರಂಪ್‌, “ಖಮೇನಿ ನಮ್ಮ ಗುಪ್ತಚರ ಮತ್ತು ಅತ್ಯಾಧುನಿಕ ಟ್ರ್ಯಾಕಿಂಗ್ ವ್ಯವಸ್ಥೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನಾವು ಇಸ್ರೇಲ್‌ನೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದರಿಂದ, ಖಮೇನಿ ಜೊತೆಗೆ ಅವರ ಅನೇಕ ನಿಕಟವರ್ತಿಗಳು ಸಾವನ್ನಪ್ಪಿದ್ದಾರೆ. ಇರಾನ್‌ ಜನತೆ ತಮ್ಮ ದೇಶವನ್ನು ಮರಳಿ ಪಡೆಯಲು ಇದು ಏಕೈಕ ದೊಡ್ಡ ಅವಕಾಶವಾಗಿದೆ” ಎಂದು ಡೊನಾಲ್ಡ್‌ ಟ್ರಂಪ್‌ ಸೂಚ್ಯವಾಗಿ ಹೇಳಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement