Connect with us

ಅಂತರರಾಷ್ಟ್ರೀಯ

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ

Published

on

ನ್ಯೂಯಾರ್ಕ್: ದುಷ್ಕರ್ಮಿಯೊಬ್ಬ ಅಮಾಯಕರ ಮೇಲೆ ಮನಬಂದಂತೆ ಗುಂಡು ಹಾರಿಸಿ ಇಬ್ಬರು ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಘಟನೆ ಟೆಕ್ಸಾಸ್‌ನ (Texas) ಆಸ್ಟಿನ್‌ನಲ್ಲಿ ನಡೆದಿದೆ. ಮೃತಪಟ್ಟವರ ಪೈಕಿ ಒಬ್ಬ ವಿದ್ಯಾರ್ಥಿನಿ ಭಾರತೀಯ  ಮೂಲದವಳಾಗಿದ್ದಾಳೆ.

ಗುಂಡಿನ ದಾಳಿಯಲ್ಲಿ ಮೃತಪಟ್ಟ ಭಾರತೀಯ ಮೂಲದ ವಿದ್ಯಾರ್ಥಿನಿಯನ್ನು ಸವಿತಾ ಶಾನ್ (21)  ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಇತರೆ 14 ಜನರು ಗಾಯಗೊಂಡಿದ್ದಾರೆ. ದಾಳಿಕೋರನನ್ನು ಸೆನೆಗಲ್‌ನ ವಲಸೆಗಾರ ನ್ಡಿಯಾಗಾ ಡಯಾಗ್ನೆ (53) ಎಂದು ಗುರುತಿಸಲಾಗಿದೆ. ಈತನಿಗೆ ಭಯೋತ್ಪಾದಕ ಚಟುವಟಿಕೆಗಳ ಸಂಬಂಧವಿರುವ ಮಾಹಿತಿ ಇದೆ. ತನಿಖೆ ನಡೆಸುತ್ತಿದ್ದೇವೆ ಎಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ)ನ ಆ್ಯಕ್ಟಿಂಗ್ ಸ್ಪೆಷಲ್ ಏಜೆಂಟ್ ಅಲೆಕ್ಸ್ ಡೋರನ್ ತಿಳಿಸಿದ್ದಾರೆ.

ವಿದ್ಯಾರ್ಥಿನಿಯ ಸಾವನ್ನು ಟೆಕ್ಸಾಸ್ ವಿವಿಯ ಅಧ್ಯಕ್ಷ ಜಿಮ್ ಡೇವಿಸ್ ದೃಢಪಡಿಸಿದ್ದಾರೆ. ಇಮೇಲ್ ಮೂಲಕ ತಮ್ಮ ಕ್ಯಾಂಪಸ್‌ಗೆ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಈ ಆಘಾತಕಾರಿ ಘಟನೆಯಿಂದ ಅತೀವ ಬೇಸರ ಉಂಟಾಗಿದೆ. ನಾವು ಆಕೆಯನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತೇವೆ ಎಂದು ಅವರು ತಮ್ಮ ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ.

ಗುಂಡಿನ ದಾಳಿಯನ್ನು ವಿವರಿಸಿದ ಆಸ್ಟಿನ್ ಪೊಲೀಸ್ ಮುಖ್ಯಸ್ಥೆ ಲಿಸಾ ಡೇವಿಸ್, ಭಾನುವಾರ (ಮಾ.1) ಬೆಳಗ್ಗೆ ಆರೋಪಿ ಡಯಾಗ್ನೆ ತನ್ನ ಕಾರನ್ನು ಬಿಯರ್ ಗಾರ್ಡನ್‌ನ ಹೊರ ಭಾಗದಲ್ಲಿ ನಿಲ್ಲಿಸಿ, ಜನರ ಮೇಲೆ ಪಿಸ್ತೂಲಿನಿಂದ ಗುಂಡು ಹಾರಿಸಿದ. ನಂತರ ಕಾರಿನಿಂದಿಳಿದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರ ಮೇಲೆ ರೈಫಲ್‌ನಿಂದ ಗುಂಡು ಹಾರಿಸುತ್ತಿದ್ದ. ನಂತರ ಪೊಲೀಸರು ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದರು ಎಂದು ತಿಳಿಸಿದ್ದಾರೆ.

ದುಷ್ಕರ್ಮಿ ಇರಾನ್‌ ಧ್ವಜದ ಚಿಹ್ನೆ ಧರಿಸಿದ್ದು, ಇರಾನ್‌ ಮೇಲಿನ ಅಮೆರಿಕ ದಾಳಿಗೆ ಪ್ರತಿಕಾರದ ದಾಳಿ ಇದಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸವಿತಾ ಶಾನ್ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಮತ್ತು ನಿರ್ವಹಣಾ ಮಾಹಿತಿ ವ್ಯವಸ್ಥೆಗಳಲ್ಲಿ ಬ್ಯಾಚುಲರ್ ಪದವಿ ಪಡೆಯುತ್ತಿದ್ದಳು. ಈ ವರ್ಷ ಪದವಿ ಪಡೆಯುವ ನಿರೀಕ್ಷೆ ಹೊಂದಿದ್ದರು. ಅಲ್ಲದೇ ಆಸ್ಟಿನ್ ತಮಿಳು ಸಂಗಮ್‌ನಲ್ಲಿ ಸ್ವಯಂಸೇವಕರಾಗಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement