Connect with us

ಇಂದಿನ ಕಾರ್ಯಕ್ರಮ

ಕರ್ನಾಟಕ ಬಜೆಟ್ 2026ಕ್ಕೆ ಕ್ಷಣಗಣನೆ: ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

Published

on

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಕರ್ನಾಟಕ ಸರ್ಕಾರದ 2026 – 2027ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ ಬಜೆಟ್ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ದಾಖಲೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಾರಿಯ ಕರ್ನಾಟಕ ಬಜೆಟ್ ಹಲವು ಕಾರಣಕ್ಕೆ ಗಮನ ಸೆಳೆದಿದೆ. ಅಲ್ಲದೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಹಾಗೂ ರಾಜಕೀಯ ದೃಷ್ಟಿಯಿಂದಲೂ ಈ ಬಾರಿಯ ಬಜೆಟ್ ಮಹತ್ವವನ್ನು ಪಡೆದುಕೊಂಡಿದೆ. ಶುಕ್ರವಾರ ಮಾರ್ಚ್ 6ರಂದು 10.15ಕ್ಕೆ ಬಜೆಟ್ ಮಂಡನೆ ಆಗಲಿದೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಮಂಡನೆ ಮಾಡುತ್ತಿರುವ ಬಜೆಟ್ ರಾಜ್ಯದಲ್ಲೇ ಅತ್ಯಂತ ಹೆಚ್ಚು ಹಾಗೂ ದೇಶದಲ್ಲೇ ಎರಡನೇ ಅತಿ ಹೆಚ್ಚು ಆಯವ್ಯಯ ಎನ್ನುವ ದಾಖಲೆಯನ್ನು ಬರೆಯಲಿದೆ. ಗ್ಯಾರಂಟಿ ಯೋಜನೆಗಳ ಭಾರ ಹಾಗೂ ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಆದಾಯ ಬರೆದೆ ಇರುವುದರಿಂದ ಈ ಬಾರಿಯ ಬಜೆಟ್ ಆರ್ಥಿಕ ಶಿಸ್ತನ್ನು ಒಳಗೊಂಡಿರಲಿದೆ. ಅಲ್ಲದೆ ಹೊಸ ಘೋಷಣೆಗಳ ಸಾಧ್ಯತೆ ವಿರಳ ಎಂದೂ ಹೇಳಲಾಗುತ್ತಿದೆ.

ಈ ವಿಷಯಗಳಿಗೆ ಒತ್ತು ನೀಡುವ ಸಾಧ್ಯತೆ ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ಬಾರಿ ಬಜೆಟ್ ಮಂಡನೆ ಮಾಡಿದ್ದು, ಅವರ ದಾಖಲೆಯನ್ನು ಸಿದ್ದರಾಮಯ್ಯ ಅವರೇ ಮುರಿಯಲಿದ್ದಾರೆ. ಈ ಬಾರಿಯ ಕರ್ನಾಟಕ ಬಜೆಟ್ ಹಲವು ಕಾರಣಗಳಿಗೆ ಮುಖ್ಯವಾಗಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ಪಾಲಿಕೆಗಳ ಚುನಾವಣೆ ನಡೆಯಲಿವೆ. ಈ ಕಾರಣಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಈ ವಿಷಯಗಳನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಇಲ್ಲವೇ ಈ ಕ್ಷೇತ್ರಗಳಿಗೆ ಪೂರಕವಾಗಿ ಹೆಚ್ಚು ಅನುದಾನವನ್ನು ಮೀಸಲಿರಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷದ ಮತಬ್ಯಾಂಕ್ ಮೇಲೆ ಬಜೆಟ್ ಒಲವು ಇರುವ ಸಾಧ್ಯತೆ ಇದೆ.

ಗ್ಯಾರಂಟಿ ಯೋಜನೆಯೇ ಸವಾಲು ಇನ್ನು ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ ಬಜೆಟ್ ಮುಖ್ಯವಾಗಿ ಗ್ಯಾರಂಟಿ ಯೋಜನೆಗಳಿಂದಲೂ ಪ್ರಮುಖವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಮೀಸಲಿರಿಸಬೇಕಾಗಿರುವುದು ಸವಾಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬಂದಾಗಿನಿಂದಲೂ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಮೀಸಲಿರಿಸುವುದಕ್ಕೆ ತಿಣುಕಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಅಂದಾಜು 60 ಸಾವಿರ ಕೋಟಿ ರೂ. ಅನುದಾನ ಬೇಕಾಗುತ್ತದೆ. ಹೀಗಾಗಿ, ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಹೇಗೆ ಹೊಂದಾಣಿಕೆ ಮಾಡುತ್ತಾರೆ ಎನ್ನುವ ಕುತೂಹಲವಿದೆ. ಇದೇ ಸಂದರ್ಭದಲ್ಲಿ ಹೊಸ ಹೊರೆಗಳ ಬಗ್ಗೆಯೂ ಆತಂಕ ಹೆಚ್ಚಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement