Connect with us

ಇತರ

ಅಡುಗೆ ಕೊನೆಯಲ್ಲಿ ಅತ್ತೆಯ ಹೈ ಕಮಾಂಡ್….ಅತ್ತೆಯ ಕಾಟಕ್ಕೆ ನೊಂದ ಸೊಸೆ (ಸಾಫ್ಟ್ ವೇರ್ ಉದ್ಯೋಗಿ) ಆತ್ಮಹತ್ಯೆ..!!

Published

on

ಬೆಂಗಳೂರು: ಅಡುಗೆ ಮಾಡುವ ವಿಚಾರದಲ್ಲಿ ನಡೆದ ಕಲಹದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಅಬ್ಬಿಗೆರೆ ಪ್ರದೇಶದಲ್ಲಿ ನಡೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅತ್ತೆಯ ಕಾಟದಿಂದ ಬೇಸತ್ತು ಟೆಕ್ಕಿ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ನಿವಾಸಿ ಸುಶ್ಮಾ (35) ಡೆಲ್ ಸಂಸ್ಥೆಯ ಉದ್ಯೋಗಿಯಾಗಿದ್ದರು. ಕಳೆದ ಐದು ವರ್ಷಗಳ ಹಿಂದೆ ಪುನೀತ್ ಕುಮಾರ್​ ಎಂಬಾತನನ್ನು ವಿವಾಹವಾಗಿದ್ದರು. ಈ ದಂಪತಿಗೆ ನಾಲ್ಕು ವರ್ಷದ ಪುತ್ರನೂ ಇದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಸಣ್ಣಪುಟ್ಟ ವಿಚಾರಗಳ ಕುರಿತಾಗಿ ಆಗಾಗ್ಗೆ ಕಲಹಗಳು ನಡೆಯುತ್ತಿದ್ದವು ಎನ್ನಲಾಗಿದೆ. ಮಂಗಳವಾರ ಅತ್ತೆ ಕಲ್ಪನಾರೊಂದಿಗೆ ಸುಶ್ಮಾರಿಗೆ ಅಡುಗೆ ಮಾಡುವ ವಿಚಾರದಲ್ಲಿ ವಾಗ್ವಾದ ಉಂಟಾಗಿತ್ತು. ಸುಶ್ಮಾ ಕುಟುಂಬದವರ ಆರೋಪದಂತೆ, ಆಕೆಯ ಅತ್ತೆ ಪದೇಪದೇ ಅಡುಗೆ ಮಾಡುವ ವಿಷಯದಲ್ಲಿ ಕಿರಿಕ್ ಮಾಡುತ್ತಿದ್ದು, ಇತರೆ ವಿಷಯಗಳಲ್ಲಿಯೂ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಇದರಿಂದ ಮಾನಸಿಕವಾಗಿ ನೊಂದಿದ್ದ ಸುಶ್ಮಾ, ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯ ನಂತರ ತಿಳಿಸಿದ್ದಾರೆ. ಇದೀಗ ವರದಕ್ಷಿಣೆ ಕಿರುಕುಳ ಆರೋಪದ ಮೇರೆಗೆ ಪತಿ ಪುನೀತ್ ಕುಮಾರ್​ನನ್ನೂ ಪೊಲೀಸರು ಬಂಧಿಸಿದ್ದಾರೆ. ಪರಾರಿಯಾಗಿರುವ ಅತ್ತೆ ಕಲ್ಪನಾ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಪೂರ್ವಾಪರ ವಿಚಾರಗಳನ್ನು ಪೊಲೀಸರು ಸವಿಸ್ತಾರವಾಗಿ ಪರಿಶೀಲಿಸುತ್ತಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement