Connect with us

ಇತರ

ಮಹಿಳಾ ದಿನದಂದೇ ಸಿಲಿಂಡರ್ ಬೆಲೆ ಏರಿಕೆ… ಕೇಂದ್ರದ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ

Published

on

ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲೇ ಕೇಂದ್ರ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವುದು ಮಹಿಳೆಯರಿಗೆ ನೀಡಿದ ಅತ್ಯಂತ ಕಹಿಯಾದ “ಉಡುಗೊರೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೀವ್ರವಾಗಿ ಕಿಡಿಕಾರಿದ್ದಾರೆ.


ಬೆಲೆ ಏರಿಕೆ ಕುರಿತು ಪ್ರತಿಕ್ರಿಯಿಸಿರುವ ಅವರು, ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 60 ರೂ. ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 115 ರೂ. ಏರಿಕೆ ಮಾಡಿರುವುದು ಖಂಡನೀಯ. ಕಳೆದ 11 ತಿಂಗಳಲ್ಲಿ ಒಟ್ಟು 110 ರೂ. ಹೆಚ್ಚಳ ಮಾಡಲಾಗಿದ್ದು, ಇದು ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಜೀವನದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಒಂದು ಕಡೆ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕೇಂದ್ರ ಸರ್ಕಾರ, ಮತ್ತೊಂದೆಡೆ ಮಹಿಳೆಯರ ದಿನದಂದೇ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ದ್ರೋಹ ಬಗೆದಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

 

ರಾಜ್ಯ ಸರ್ಕಾರದ ವಿರುದ್ಧ ಸದಾ ಪ್ರತಿಭಟನೆ ನಡೆಸುವ ಬಿಜೆಪಿ ನಾಯಕರು, ಈಗ ಕೇಂದ್ರದ ಈ ಜನವಿರೋಧಿ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಾರೆಯೇ ಅಥವಾ ಬಡವರ ಪರ ಧ್ವನಿ ಎತ್ತುತ್ತಾರೆಯೇ ಎಂದು ಸಚಿವರು ಪ್ರಶ್ನಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version