ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಬಂಗಾರದ ಕವಚದಿಂದ ಶೃಂಗಾರ ಮಾಡಬೇಕೆಂಬ ಕನಸಿದೆ. ಅದಕ್ಕೆ ಭಕ್ತರ ಸಹಕಾರ ಬೇಕೆಂದು ಶಾಸಕ ಅಶೋಕ್ ಕುಮಾರ್ ರೈ ಅವರು ಮನವಿ ಮಾಡಿದ್ದಾರೆ.
ಏ.10 ರಿಂದ ನಡೆಯಲಿರುವ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ಸಂದರ್ಭದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಸದಸ್ಯರು ಉಪಸ್ಥಿತರಿದ್ದರು.