Published
3 hours agoon
By
Akkare News
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ಹರಿನಾರಾಯಣ ಅಸ್ರಣ್ಣ ದಂಪತಿ ಮಾ.10ರಂದು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಮಧ್ಯಾಹ್ನ ಮಹಾಪೂಜೆಯ ಸಂದರ್ಭ ಆಗಮಿಸಿದ ಅಸ್ರಣ್ಣ ದಂಪತಿ ತುಪ್ಪದ ದೀಪ ಬೆಳಗಿಸಿದರು. ಬಳಿಕ ಮಹಾಪೂಜೆಯನ್ನು ವೀಕ್ಷಿಸಿ ಪ್ರಸಾದ ಸ್ವೀಕರಿಸಿದರು.
ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಪ್ರಾರ್ಥಿಸಿ ಪ್ರಸಾದ ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ದೇವಳದ ಗೌರವಾರ್ಥ ಶಲ್ಯ ತೊಡಿಸಿದರು. ಈ ಸಂದರ್ಭವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ಸುಭಾಷ್ ರೈ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.








