Published
4 hours agoon
By
Akkare News
ಕರ್ನಾಟಕ (ಕರ್ನಾಟಕ ) ಬಿರು ಬೇಸಿಗೆಯ (ಸಮ್ಮರ್ ) ಬೇಗೆ ಹೆಚ್ಚಿದ್ದು, ಸೂರ್ಯನ ಶಾಖ ಜೋರಾಗಿದೆ. ಈ ನಡುವೆ ಮಳೆಯ ಸಿಂಚನ ಆಗಲಿದೆ ಎಂದು ಹವಾಮಾನ ಇಲಾಖೆ (ವೀಥಿರ್ ಫಾರೆಕಾಸ್ಟ್ ) ಹೇಳಿದೆ.
ಮಾ. 15ರಿಂದ 17ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಕೆಯಿಂದ ಕಂಗಾಲಾಗಿರೋ ಜನರಿಗೆ ಮಳೆ ತಂಪೆರೆಯಲಿದೆ.

ಎಲ್ಲೆಲ್ಲಿ ಮಳೆ..?
ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮಾ.16ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಗದಗ, ಧಾರವಾಡ ಮತ್ತು ಕೊಪ್ಪಳ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ) ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.

ಹಾಗೆಯೇ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆಯಿದೆ. ಮಾ. 17ರಂದು ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಮುಂದಿನ 2 ದಿನಗಳವರೆಗೆ ಕರಾವಳಿಯಲ್ಲಿ ತೇವಾಂಶದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.







