Published
3 hours agoon
By
Akkare News
ಬಂಟ್ವಾಳ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಲೋಗೋವನ್ನು ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹಾಗೂ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅನಾವರಣಗೊಳಿಸಿದರು
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಡೆನ್ನನ ಪ್ರಧಾನ ಸಂಚಾಲಕರು ಶ್ರೀನಿವಾಸ ಪೂಜಾರಿ ಮೆಲ್ಕಾರ್, ಜೊತೆ ಕಾರ್ಯದರ್ಶಿ ಆನಂದ ಶಂಬೂರು, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಪ್ರಥಮ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್, ದ್ವಿತೀಯ ಉಪಾಧ್ಯಕ್ಷರಾದ ಸುರೇಶ್ ಪೂಜಾರಿ, ಕೋಶಾಧಿಕಾರಿ ಸತೀಶ್ ಕಿಲ್ಪಾಡಿ, ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ ,ಸಮಾವೇಶ ನಿರ್ದೇಶಕರಾದ ಅಜಿತ್ ಪಾಲೇರಿ, ಪ್ರಚಾರ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಸಂಘಟನಾ ಕಾರ್ಯದರ್ಶಿ ನಾಗೇಶ್ ಪೂಜಾರಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮದ್ವ, ಕೋಶಾಧಿಕಾರಿ ನವೀನ್ ಪೂಜಾರಿ ಲೊರೆಟ್ಟೋ, ಉಪಾಧ್ಯಕ್ಷರಾದ ನಿಕೇಶ್ ಕೋಟ್ಯಾನ್, ಸಾಂಸ್ಕೃತಿಕ ನಿರ್ದೇಶಕರಾದ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಡೆನ್ನಾನ ಸಂಚಾಲಕರಾದ ಸಂಚಾಲಕರಾದ ಉದಯ ಪೂಜಾರಿ ಮೇನಾಡು, ಸತೀಶ್ ಪೂಜಾರಿ ಬಾಯಿಲ, ಸಲಹೆಗಾರರಾದ ರಾಮಚಂದ್ರ ಸುವರ್ಣ ತುಂಬೆ, ಮಾಜಿ ಅಧ್ಯಕ್ಷರು ಸದಸ್ಯರು
ಉಪಸ್ಥಿತರಿದ್ದರು
ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿ, ನಿರೂಪಿಸಿದರು.