Connect with us

ಧಾರ್ಮಿಕ

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ, ಧರ್ಮದೈವಗಳ ನೇಮೋತ್ಸವ, ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Published

on

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ, ಧರ್ಮದೈವಗಳ ನೇಮೋತ್ಸವ ಮತ್ತು ಜಾತ್ರೋತ್ಸವದ ಆಮಂತ್ರಣ ಪತ್ರವನ್ನು ಮಾ.22ರಂದು ದೇವಳದ ಚಿನ್ಮಯೀ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.

ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬಿಡುಗಡೆಗೊಳಿಸಿದರು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ನಿರಂಜನ ರೈ ಮಠಂತಬೆಟ್ಟು, ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿ ಸಂಚಾಲಕರು, ಬೈಲುವಾರು ಸಮಿತಿಯ ಸಂಚಾಲಕರು, ಧರ್ಮದೈವ ನೇಮೋತ್ಸವ ಸಮಿತಿಯ ಸದಸ್ಯರು, ಸಿಬ್ಬಂದಿ ವರ್ಗದವರು ಸಹಿತ ಭಕ್ತರು ಉಪಸ್ಥಿತರಿದ್ದರು. ದೇವಳದ ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ ಕೆದಿಕಂಡೆಗುತ್ತು ಸ್ವಾಗತಿಸಿ ವಂದಿಸಿದರು.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement