Connect with us

ಇತರ

ಕಾಸರಗೋಡು: ಚುನಾವಣಾ ಪಟ್ಟಿ ತಯಾರಿ ಸಂಬಂಧ ಕೆಲಸದ ಒತ್ತಡ : ಬಿ ಎಲ್ ಒ ನದಿಗೆ ಹಾರಿ ಆತ್ಮ ಹತ್ಯೆ

Published

on

ಕಾಸರಗೋಡು: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಒಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆ ಸಮೀಪದ ಮೊಗ್ರಾಲ್‌ನಲ್ಲಿ ಶನಿವಾರ ನಡೆದಿರುವುದು ವರದಿಯಾಗಿದೆ.

ಮೊಗ್ರಾಲ್‌ನ ಮುಹಮ್ಮದ್ ಸವಾದ್(32) ಮೃತಪಟ್ಟವರು. ಇವರು ಚೆರ್ಕಳ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕರಾಗಿದ್ದರು.

ಶನಿವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಸವಾದ್‌ಗಾಗಿ ಮನೆಯವರು ಶೋಧ ನಡೆಸಿದ್ದು, ಈ ನಡುವೆ ಮೊಗ್ರಾಲ್ ಸೇತುವೆ ಮೇಲೆ ಸವಾದ್‌ರ ಬೈಕ್ ಪತ್ತೆಯಾಗಿದೆ. ಬಳಿಕ ಕುಟುಂಬಸ್ಥರು ಹಾಗೂ ನಾಗರಿಕರು ಹುಡುಕಾಡಿದಾಗ ನದಿಯಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ದರೂ ಆಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.ಸವಾದ್ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

 

ಮುಹಮ್ಮದ್ ಸವಾದ್ ಸಾವಿನ ಬಗ್ಗೆ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯ ವೇಳೆ ಡೆತ್ ನೋಟ್ ಪತ್ತೆಯಾಗಿದೆ. ವೈಯುಕ್ತಿಕ ಕಾರಣಗಳಿಂದ ಅವರು ಕೃತ್ಯ ಎಸಗಿದ್ದಾಗಿ ಪೊಲೀಸರು ವರದಿ ನೀಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಗೆ ಆದೇಶ ನೀಡಲಾಗಿದೆ ಎಂದು ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಅರ್ಹ ಎಲ್ಲಾ ಸೌಲಭ್ಯಗಳನ್ನು ಖಾತರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version