Published
4 weeks agoon
By
Akkare News
ಬೆಳ್ತಂಗಡಿ : ರಾಜ ಕೇಸರಿ ಸೇವಾ ಟ್ರಸ್ಟ್ (ರಿ) ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರು ಅಂಬೇಡ್ಕರ್ ಸೇವಾರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135 ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕಾರಿಗೆ ಅಂತಾರಾಷ್ಟ್ರೀಯ ಪ್ರಧಾನ ಸಮಾರಂಭ ಏಪ್ರಿಲ್ 15 ರಂದು ನಡೆಯಲಿದೆ.
ಕಾರ್ಯಕ್ರಮದಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ಕಡು ಬಡವರನ್ನು ಆರಿಸಿ ಅವರಿಗೆ ಕೈಲಾದ ಸೇವೆಯ ಮೂಲಕ ಸರಕಾರಿ ಶಾಲೆಗಳ ಸ್ವಚ್ಛಾಲಯದ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜ ಕೇಸರಿ ಸೇವಾ ಟ್ರಸ್ಟ್ (ರಿ) ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರು ಆಯ್ಕೆಯಾಗಿದ್ದಾರೆ.






