Connect with us

ಅಪಘಾತ

ನಿಂತಿಕಲ್ಲು : ವಿದ್ಯುತ್ ಕಂಬಕ್ಕೆ ಗುದ್ದಿದ ಬೈಕ್ -ಸವಾರ ಮೆಸ್ಕಾಂ ಸಿಬ್ಬಂದಿ ಮೃತ್ಯು

Published

on

ನಿಂತಿಕಲ್ಲಿನ ಕೆನರಾ ಬ್ಯಾಂಕ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್‌ ಡಿಕ್ಕಿಯಾಗಿ ಸವಾರ ಲೋಕನಾಥ (35) ಎಂಬವರು ಮೃತಪಟ್ಟ ಘಟನೆ ಇಂದು ನಡೆದಿದೆ.

ಸುಳ್ಯದಿಂದ ಮನೆಗೆ ತೆರಳುತ್ತಿದ್ದಾಗ ನಿಂತಿಕಲ್ಲು ಕೆನರಾ ಬ್ಯಾಂಕ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು . ಅಲ್ಲಿ ಅವರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ.

ಸುಳ್ಯ ಮೆಸ್ಕಾಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಮೀಟ‌ರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement