Connect with us

ಇತರ

ತೊಕ್ಕೊಟ್ಟು – ರೌಡಿ ಶೀಟರ್ ಕಗ್ಗೊಲೆ

Published

on

ಮಂಗಳೂರು ಮಾರ್ಚ್ 27: ದುಷ್ಕ್ರರ್ಮಿಗಳು ರೌಡಿ ಶೀಟರ್ ಒಬ್ಬನನ್ನು ಕೊಲೆ ಮಾಡಿರುವ ಘಟನೆ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ., ಆರಿಫ್ ಬೈಕ್‌ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ತಕ್ಷಣವೇ, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version