Published
3 weeks agoon
By
Akkare News
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಏ.1ರಂದು ಗೊನೆ ಮುಹೂರ್ತ ನಡೆಯಲಿದೆ.
ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಲಿದೆ. ಗೊನೆ ಮುಹೂರ್ತವಾದ ಬಳಿಕ, ಮಧ್ಯಾಹ್ನ ಕೊಟ್ಟಿಬೆಟ್ಟು ಏಳ್ಳಾಡುಗುತ್ತು ಅವರಿಂದ ಅನ್ನಸಂತರ್ಪಣೆ ನಡೆಯಲಿದೆ. ಏ.10ರಂದು ಧ್ವಜಾರೋಹಣದ ಮೂಲಕ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರತಿ ದಿನ ಸಂಜೆ ಉತ್ಸವ ಪೇಟೆ ಸವಾರಿ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.