Connect with us

ಇತರ

ಬೆಂಗಳೂರು ಮಂಗಳೂರು ಕಣ್ಣೂರು ವಿಶೇಷ ರೈಲು: ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಪ್ರಯಾಣಿಕರಿಗೆ ಅನುಕೂಲ

Published

on

ಬೆಂಗಳೂರು: ಬೆಂಗಳೂರು ಮಂಗಳೂರು ಕಣ್ಣೂರು ವಿಶೇಷ ರೈಲು ಓಡಿಸಲಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ರೈಲು ಏಪ್ರಿಲ್ 2 ಮತ್ತು 3 ರಂದು ಸಂಚಾರ ನಡೆಸಲಿದೆ.

ಗುಡ್ ಫ್ರೈಡೆ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು, ನೈರುತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕೇರಳದ ಕರಾವಳಿ ನಗರಿ ಕಣ್ಣೂರು ನಡುವೆ ಮಂಗಳೂರು ಜಂಕ್ಷನ್ ಮಾರ್ಗವಾಗಿ ಒಂದು ಟ್ರಿಪ್ ವಿಶೇಷ ರೈಲನ್ನು ಕಾರ್ಯಾಚರಣೆಗೊಳಿಸಲಿದೆ.

ಯಶವಂತಪುರ – ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್‌

  • ರೈಲು ಸಂಖ್ಯೆ 06551 ಯಶವಂತಪುರ – ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಏಪ್ರಿಲ್ 2, 2026ರ ಗುರುವಾರ ಬೆಳಿಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಏಪ್ರಿಲ್ 3ರ ಶುಕ್ರವಾರ ಮುಂಜಾನೆ 3.00 ಗಂಟೆಗೆ ಕಣ್ಣೂರು ತಲುಪಲಿದೆ.
  • ಮರಳಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06552 ಕಣ್ಣೂರು–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು ಏಪ್ರಿಲ್ 3ರ ಶುಕ್ರವಾರ ಬೆಳಿಗ್ಗೆ 8.45ಕ್ಕೆ ಕಣ್ಣೂರಿನಿಂದ ಹೊರಟು, ಅದೇ ದಿನ ರಾತ್ರಿ 9.30ಕ್ಕೆ ಯಶವಂತಪುರವನ್ನು ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಈ ವಿಶೇಷ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಮಂಗಳೂರು ಜಂಕ್ಷನ್, ಕಾಸರಗೋಡು, ಕಾಂಜನಗಾಡ್ ಮತ್ತು ಪಯ್ಯನ್ನೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಕುಕ್ಕೆ ಸುಬ್ರಮಣ್ಯಕ್ಕೆ ತೆರಳುವ ಪ್ರಯಾಣಿಕರಿಗೆ ಈ ರೈಲು ಅನುಕೂಲವಾಗಲಿದೆ. ಬೆಂಗಳೂರಿನಿಂದ ಗುರುವಾರ ಮಧ್ಯಾಹ್ನ ಹೊರಟು ಸಂಜೆ 7 ಗಂಟೆಗೆ ಸುಬ್ರಹ್ಮಣ್ಯ ರಸ್ತೆ ತಲುಪಲಿದೆ. ಮರುದಿನ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸುಬ್ರಹ್ಮಣ್ಯರಸ್ತೆಯಿಂದ ಬೆಂಗಳೂರಿನ ಕಡೆ ಹೊರಡಲಿದೆ.

 

ಎಷ್ಟು ಬೋಗಿಗಳು?

ಈ ರೈಲು ಒಟ್ಟು 21 ಬೋಗಿಗಳನ್ನು ಹೊಂದಿರಲಿದ್ದು, ಅವುಗಳಲ್ಲಿ 2 ಎಸಿ ಟು-ಟಯರ್, 6 ಎಸಿ ತ್ರೀ-ಟಯರ್, 7 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ 2 ಲಗೇಜ್ ಕಮ್ ಜನರೇಟರ್ ಕಾರ್ ಮತ್ತು ಬ್ರೇಕ್ ವ್ಯಾನ್ಗಳು ಇರಲಿವೆ.

 

ಯಶವಂತಪುರ ಶಿವಮೊಗ್ಗ ತಾಳಗುಪ್ಪ ರೈಲು

ಯಶವಂತಪುರ ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್‌ ರೈಲು ಏ. 3ರಂದು ರಾತ್ರಿ 10.45ಕ್ಕೆ ಯಶವಂತ ಪುರದಿಂದ ಹೊರಟು, ಏ.4ರಂದು ಬೆಳಗ್ಗೆ 5ಕ್ಕೆ ತಾಳಗುಪ್ಪ ತಲುಪಲಿದೆ. ವಾಪಸ್ಸಾಗುವ ವೇಳೆ ರೈಲು ಏ.4ರಂದು ಬೆಳಗ್ಗೆ 9.30ಕ್ಕೆ ತಾಳಗುಪ್ಪದಿಂದ ಹೊರಟು, ಸಂಜೆ 5.15ಕ್ಕೆ ಯಶವಂತಪುರ ಸೇರಲಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version