Published
3 weeks agoon
By
Akkare News
ಬೆಂಗಳೂರು ಎಪ್ರಿಲ್ 04: ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (HSRP) ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ “ಹಳೆಯ ವಾಹನಗಳಿಗೆ ಹೆಚ್ಎಸ್ಆರ್ಪಿ ಕಡ್ಡಾಯವಲ್ಲ” ಎಂಬ ತಪ್ಪು ಮಾಹಿತಿ ಹರಡುತ್ತಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯು ಮಾಧ್ಯಮ ಪ್ರಕಟಣೆ ಹೊರಡಿಸಿ, ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ವಾಹನ ಮಾಲೀಕರಿಗೆ ಮನವಿ ಮಾಡಿದೆ. 1989ರ ಕೇಂದ್ರ ಮೋಟಾರು ವಾಹನ ನಿಯಮಗಳ 50ನೇ ವಿಧಿಯ ಅನ್ವಯ ಈ ನಿಯಮ ಜಾರಿಯಲ್ಲಿದ್ದು, ಇದನ್ನು ರಾಜ್ಯ ಸರ್ಕಾರ 2023ರ ಅಧಿಸೂಚನೆಯಲ್ಲಿ ಎತ್ತಿಹಿಡಿದಿದೆ. ನ್ಯಾಯಾಲಯವು ಕೂಡ ಸರ್ಕಾರದ ನಿರ್ಧಾರದಂತೆ ಕ್ರಮ ಕೈಗೊಳ್ಳಲು ಹಸಿರು ನಿಶಾನೆ ತೋರಿಸಿರುವುದರಿಂದ, ಈ ನಿಯಮದಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾರಿಗೆ ಇಲಾಖೆಯ ಪ್ರಕಾರ 01 ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ತಿಳಿಸಿದೆ. ರಾಜ್ಯದ ಎಲ್ಲಾ ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ತಕ್ಷಣವೇ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.
ಕೇಂದ್ರ ಸರ್ಕಾರವು 1989ರ ಕೇಂದ್ರ ಮೋಟಾರು ವಾಹನ ನಿಯಮಗಳ 50ನೇ ವಿಧಿಯ ಅನ್ವಯ, 01 ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಕೆ ಕಡ್ಡಾಯ ಮಾಡಿದೆ. ಈ ನಿಯಮವು 2018ರಲ್ಲಿ ಜಾರಿಗೊಂಡಿದ್ದು, ರಾಜ್ಯದಲ್ಲಿಯೂ ಈ ನಿಯಮ ಅನ್ವಯವಾಗುತ್ತಿದೆ. ರಾಜ್ಯ ಸಾರಿಗೆ ಇಲಾಖೆ 2023ರಲ್ಲಿ ಹೊರಡಿಸಿದ ಅಧಿಸೂಚನೆ ಪ್ರಕಾರ, 2019ರ ಏಪ್ರಿಲ್ 1ರ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು.
ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ, ನ್ಯಾಯಾಲಯವು ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಅವಕಾಶ ನೀಡಿದ್ದು, ಹೆಚ್ಎಸ್ಆರ್ಪಿ ಅಳವಡಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಅನುಸರಿಸುವಂತೆ ಸೂಚಿಸಿತ್ತು. ಇದೇ ಸಂದರ್ಭದಲ್ಲಿ, ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.