Connect with us

ಅಪಘಾತ

ಸಂಪಾಜೆ ಘಾಟಿಯಲ್ಲಿ ವಾಹನ ಅಪಘಾತ: ಇಬ್ಬರಿಗೆ ಗಾಯ,

Published

on

ಸುಳ್ಯ: ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸರಕು ಸಾಗಣೆ ವಾಹನವೊಂದು ಸಂಪಾಜೆ ಘಾಟಿ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೊದೆಗೆ ನುಗ್ಗಿ ಅಪಘಾತಕ್ಕೀಡಾದ ಘಟನೆ ನಡೆದಿದೆ.
ಈ ದುರ್ಘಟನೆಯಲ್ಲಿ ವಾಹನದಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸುಳ್ಯದ ಕೆವಿಜಿ (KVG) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಮಂಗಳೂರು-ಮೈಸೂರು ಹೆದ್ದಾರಿಯ ಸಂಪಾಜೆ ಘಾಟಿಯ ತಿರುವಿನಲ್ಲಿ ಈ ಘಟನೆ ನಡೆದಿದ್ದು, ವಾಹನವು ರಸ್ತೆ ಬಿಟ್ಟು ಕೆಳಗಿಳಿದು ಮರಗಿಡಗಳ ನಡುವೆ ಸಿಲುಕಿಕೊಂಡಿದೆ. ಇದರಿಂದ ವಾಹನಕ್ಕೆ ಹಾನಿಯಾಗಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version