Connect with us

ಅಂತರರಾಷ್ಟ್ರೀಯ

ಇರಾನ್ ಮೇಲೆ ಭೀಕರ ದಾಳಿ ನಿರ್ಧಾರದಿಂದ ಓಡಿ ಹೋದ ಟ್ರಂಪ್…. ಕೊನೆಗೂ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಘೋಷಣೆ.

Published

on

ವಾಷಿಂಗ್ಟನ್/ಟೆಹ್ರಾನ್, ಏಪ್ರಿಲ್ 8: ಇರಾನ್ (Iran) ಮೇಲೆ ವಿನಾಶಕಾರಿ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ಗಂಟೆಗಳಿರುವಾಗ ಬಹು ದೊಡ್ಡ ರಾಜತಾಂತ್ರಿಕ ಬೆಳವಣಿಗೆ ನಡೆದಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಟ್ರಂಪ್ ತಮ್ಮ ಬಾಂಬ್ ದಾಳಿಯ ನಿರ್ಧಾರವನ್ನು ಸ್ಥಗಿತಗೊಳಿಸಿದ್ದು, ಎರಡು ವಾರಗಳ ಕದನ ವಿರಾಮಕ್ಕೆ (US Iran Ceasefire) ಸಮ್ಮತಿಸಿದ್ದಾರೆ.

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಸಮ್ಮತಿ

ಕಳೆದ ಐದು ವಾರಗಳಿಂದ ನಡೆಯುತ್ತಿದ್ದ ಯುದ್ಧವು ಜಗತ್ತಿನ ತೈಲ ಪೂರೈಕೆಯ ನಾಡಿಮಿಡಿತವಾದ ‘ಹಾರ್ಮುಜ್ ಜಲಸಂಧಿ’ಯನ್ನು ಬಂದ್ ಮಾಡಿತ್ತು. ಈಗ ಇರಾನ್ ಈ ಜಲಸಂಧಿಯನ್ನು ತಕ್ಷಣವೇ ಮತ್ತು ಸುರಕ್ಷಿತವಾಗಿ ತೆರೆಯಲು ಒಪ್ಪಿಕೊಂಡಿದೆ. ಟ್ರಂಪ್ ಈ ಹಿಂದೆ ಇರಾನ್‌ನ ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವುದಾಗಿ ಎಚ್ಚರಿಸಿದ್ದರು, ಇದು ಯುದ್ಧಾಪರಾಧವಾಗಬಹುದು ಎಂದು ವಿಶ್ವಸಂಸ್ಥೆ ಮತ್ತು ಪೋಪ್ ಕೂಡ ಆತಂಕ ವ್ಯಕ್ತಪಡಿಸಿದ್ದರು. ಆದರೆ ಈಗ ಇರಾನ್ ನೀಡಿರುವ 10 ಅಂಶಗಳ ಪ್ರಸ್ತಾವನೆಯ ಆಧಾರದ ಮೇಲೆ ಶಾಂತಿ ಮಾತುಕತೆ ನಡೆಸಲು ಅಮೆರಿಕ ಮುಂದಾಗಿದೆ. ಇಸ್ರೇಲ್ ಕೂಡ ಈ ಕದನ ವಿರಾಮಕ್ಕೆ ಬೆಂಬಲ ಸೂಚಿಸಿದೆ ಎಂದು ವರದಿಯಾಗಿದೆ.

 

ಇರಾನ್​​ನ 10 ಅಂಶಗಳ ಪ್ರಸ್ತಾವನೆ ಏನು?

  1. ಆಕ್ರಮಣಶೀಲತೆ ಮಾಡದಿರುವ ವಿಚಶರದಲ್ಲಿ ಬದ್ಧತೆ
  2. ಹೊರ್ಮುಝ್​ ಮೇಲೆ ಇರಾನ್​​ ನಿಯಂತ್ರಣ ಮುಂದುವರಿಕೆ
  3. ಯುರೇನಿಯಂ ಪುಷ್ಟೀಕರಣದ ಸ್ವೀಕಾರ
  4. ಎಲ್ಲಾ ಪ್ರಾಥಮಿಕ & ದ್ವಿತೀಯ ನಿರ್ಬಂಧ ತೆರವು
  5. UN ಭದ್ರತಾ ಮಂಡಳಿ & IEAE ಆಡಳಿತ ಮಂಡಳಿಯ ನಿರ್ಣಯ ರದ್ದು
  6. ಜಲಸಂಧಿ ಆದಾಯ ಮೂಲಸೌಕರ್ಯಕ್ಕೆ ಪುನರ್​ನಿರ್ಮಾಣಕ್ಕೆ ಬಳಕೆ
  7. ಇರಾನ್‌ಗೆ ಪರಿಹಾರ ಪಾವತಿಗಳು
  8. ಅಮೆರಿಕ ಯುದ್ಧ ಪಡೆಗಳನ್ನ ಹಿಂತೆಗೆದುಕೊಳ್ಳುವುದು
  9. ಎಲ್ಲಾ ರಂಗಗಳಲ್ಲಿ ಯುದ್ಧವನ್ನ ನಿಲ್ಲಿಸುವುದು
  10. ಲೆಬನಾನ್​ ಮೇಲೆ ಇಸ್ರೇಲ್​ ದಾಳಿ ನಿಲ್ಲಿಸಬೇಕು

ಡೊನಾಲ್ಡ್ ಟ್ರಂಪ್ ಅವರ ಅಧಿಕೃತ ಹೇಳಿಕೆ ಇಲ್ಲಿದೆ

‘ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೊಂದಿಗೆ ನಡೆಸಿದ ಮಾತುಕತೆಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇಂದು ರಾತ್ರಿ ಇರಾನ್ ಮೇಲೆ ನಡೆಸಬೇಕಿದ್ದ ವಿನಾಶಕಾರಿ ದಾಳಿಯನ್ನು ತಡೆಹಿಡಿಯುವಂತೆ ಅವರು ವಿನಂತಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ, ತಕ್ಷಣವೇ ಮತ್ತು ಸುರಕ್ಷಿತವಾಗಿ ತೆರೆಯಲು ಒಪ್ಪಿಕೊಂಡಿರುವುದಕ್ಕೆ ಪ್ರತಿಯಾಗಿ, ನಾನು ಇರಾನ್ ಮೇಲಿನ ಬಾಂಬ್ ದಾಳಿ ಮತ್ತು ದಾಳಿಯನ್ನು ಎರಡು ವಾರಗಳ ಅವಧಿಗೆ ಅಮಾನತುಗೊಳಿಸಲು ಒಪ್ಪುತ್ತೇನೆ’ ಎಂದು ಟ್ರಂಪ್ ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement